ದೇಶ

ಜಾರ್ಖಂಡ್ ಎಂಜಿಎನ್‌ಆರ್‌ಇಜಿಎ ಹಗರಣ: ಅಮಾತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಕೋರ್ಟ್ ಗೆ ಶರಣು

ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಜಾರ್ಖಂಡ್ ಎಂಜಿಎನ್‌ಆರ್‌ಇಜಿಎ ಹಗರಣ: ಅಮಾತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಕೋರ್ಟ್ ಗೆ ಶರಣು
ಪೂಜಾ ಸಿಂಘಾಲ್
Published On :

ರಾಂಚಿ: ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಕೋರ್ಟ್ ಗೆ ಶರಣಾದ ಪೂಜಾ ಸಿಂಘಾಲ್ ಅವರನ್ನು ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ.

ಫೆಬ್ರವರಿ 2023 ರಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಮಗಳ ಚಿಕಿತ್ಸೆಗಾಗಿ ಸಿಂಘಾಲ್ ಅವರಿಗೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಕ್ಕೂ ಮೊದಲು ಜನವರಿ 3 ರಂದು, ಇದೇ ಆಧಾರದ ಮೇಲೆ ಸಿಂಘಾಲ್‌ಗೆ ಒಂದು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು.

ನವೆಂಬರ್ 3, 2022 ರಂದು ಜಾರ್ಖಂಡ್ ಹೈಕೋರ್ಟ್ ಜಾಮೀನು ಸಿಂಘಾಲ್ ಅವರಿಗೆ ಜಾಮೀನು ನಿರಾಕರಿಸಿದ್ದು, ಐಎಎಸ್ ಅಧಿಕಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್‌ಆರ್‌ಇಜಿಎ) ಹಣ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 15 ಗಂಟೆಗಳ ಕಾಲ ವಿಚಾರಣೆಯ ನಂತರ ಕಳೆದ ವರ್ಷ ಮೇ 11 ರಂದು ಸಿಂಘಾಲ್ ಅವರ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.