ದೇಶ

ಶೂ ಲೇಬಲ್ ಘಟಕದಲ್ಲಿ ಅಗ್ನಿ ಅವಘಡ: ಅಪ್ಪ-ಮಗ ಸಾವು

ಕೋಲ್ಕತ್ತಾದ ಶೂ ಲೇಬಲ್ ಮುದ್ರಣ ಘಟಕದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಅಪ್ಪ-ಮಗ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ಶೂ ಲೇಬಲ್ ಘಟಕದಲ್ಲಿ ಅಗ್ನಿ ಅವಘಡ: ಅಪ್ಪ-ಮಗ ಸಾವು
ಸಂಗ್ರಹ ಚಿತ್ರ
Published On :

ಕೋಲ್ಕತ್ತಾ: ಕೋಲ್ಕತ್ತಾದ ಶೂ ಲೇಬಲ್ ಮುದ್ರಣ ಘಟಕದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಅಪ್ಪ-ಮಗ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ತಿಲಜಾಲಾ ಪ್ರದೇಶದ ಹೋಟೆಲ್ ಅಲ್ಬೆಲಾ ಪಕ್ಕದಲ್ಲಿರುವ ಘಟಕದಲ್ಲಿ ಬೆಳಿಗ್ಗೆ 7.20 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಏನೆಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.