27 ಡಿಎಂಕೆ ನಾಯಕರು 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಆಸ್ತಿ ಹೊಂದಿದ್ದಾರೆ: ಅಣ್ಣಾಮಲೈ
ತಮಿಳುನಾಡಿನ ಡಿಎಂಕೆಯ 27 ನಾಯಕರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.

ಚೆನ್ನೈ: ತಮಿಳುನಾಡಿನ ಡಿಎಂಕೆಯ 27 ನಾಯಕರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.
ಶುಕ್ರವಾರ ಪಕ್ಷದ ಕಚೇರಿಯಲ್ಲಿ ಡಿಎಂಕೆ ಫೈಲ್ಸ್ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅಣ್ಣಾಮಲೈ, ದಿವಂಗತ ಕರುಣಾನಿಧಿ, ಸ್ಟಾಲಿನ್, ಅವರ ಸಹೋದರಿ ಕನಿಮೋಳಿ, ಸ್ಟಾಲಿನ್ ಪತ್ನಿ ದುರ್ಗಾ ಸ್ಟಾಲಿನ್, ಅವರ ಪುತ್ರ ಹಾಗೂ ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್, ಶಬರೇಶನ್ (ಸ್ಟಾಲಿನ್ ಅವರ ಅಳಿಯ), ಸೆಂತಾಮರೈ (ಸ್ಟಾಲಿನ್ ಸಹೋದರಿ) ಮುರಸೋಲಿ ಮಾರನ್, ದಯಾನಿಧಿ ಮಾರನ್ (ಸ್ಟಾಲಿನ್ ಅವರ ಸೋದರ ಸಂಬಂಧಿಗಳು) ಅಳಗಿರಿ (ಕರುಣಾನಿಧಿ ಅವರ ಮಗ) ಅವರ ಅಕ್ರಮ ಆಸ್ತಿ ವಿವರಗಳನ್ನು ಬಹಿರಂಗಗೊಳಿಸಿದರು.
ಈ ಆರೋಪಗಳು ಮತ್ತು ಸಂಪತ್ತು ಕ್ರೋಢೀಕರಣದ ಕುರಿತು ಸಿಬಿಐಗೆ ವಿವರವಾದ ಅರ್ಜಿಯನ್ನು ಸಲ್ಲಿಸುವುದಾಗಿ ಅವರು ಹೇಳಿದರು.
ಮೊದಲನೇ ಆವೃತ್ತಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಮುಂದಿನ ಭಾಗಗಳನ್ನು ಸರಣಿಯಲ್ಲಿ ತರಲಾಗುವುದು, ಈ ಬಿಟ್ಟಿರುವ ವಿಡಿಯೋದಲ್ಲಿ ಆಸ್ತಿ ವಿವರಗಳನ್ನು ಮಾತ್ರ ನೀಡಲಾಗಿದೆ. ಮುಂದಿನ ವಿಡಿಯೋದಲ್ಲಿ ಇದಕ್ಕಿಂತ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


