ರಾಜ್ಯಗಳಲ್ಲಿ ಬೋರ್ಡ್, ಶಾಲೆಗಳು ಎನ್ ಸಿಇಆರ್ ಟಿ ಪುಸ್ತಕಗಳನ್ನು ಸೂಚಿಸಿ: ಎನ್ ಸಿಪಿಸಿಆರ್
ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
ಎನ್ ಸಿಇಆರ್ ಟಿ ಪ್ರಕಟಿತ ಪುಸ್ತಕಗಳನ್ನು ಕೊಂಡೊಯ್ದರೆ ಶಾಲೆಗಳು ಅಂತಹ ಯಾವುದೇ ಮಕ್ಕಳನ್ನೂ ತಾರತಮ್ಯ, ಕಿರುಕುಳ ಅಥವಾ ನಿರ್ಲಕ್ಷ್ಯ ದೃಷ್ಟಿಯಿಂದ ನೋಡಿ, ಮಾನಸಿಕ ಅಥವಾ ದೈಹಿಕ ನೋವಿಗೆ ಕಾರಣವಾಗಬಾರದು ಎಂದು ಎನ್ ಸಿಪಿಸಿಆರ್ ಹೇಳಿದೆ.
ಮಕ್ಕಳ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ, ಬಾಲಾಪರಾಧ ನ್ಯಾಯ ಕಾಯಿದೆ, 2015 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ ಎಂದು ಏ.13 ರ ಪತ್ರದಲ್ಲಿ ತಿಳಿಸಲಾಗಿದೆ.
ರಾಜ್ಯವು ಹೊರಡಿಸಿದ ನಿರ್ದೇಶನಗಳನ್ನು ಅವರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಬೇಕು ಎಂದು ಆಯೋಗ ಎಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಹೇಳಿದೆ.
ಶಾಲೆಗಳು ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಮಾರಾಟ ಮಾಡಲು ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಶಾಲೆಗಳು ಪೋಷಕರಿಗೆ ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಖರೀದಿಸಲು ಒತ್ತಡ ಹೇರುತ್ತಿರುವುದರ ಬಗ್ಗೆ ನಮಗೆ ದೇಶಾದ್ಯಂತ ದೂರುಗಳು ಬರುತ್ತಿವೆ, ಖಾಸಗಿ ಶಾಲೆಗಳು ಪೋಷಕರಿಂದ ಹಣ ವಸೂಲಿ ಮಾಡುತ್ತಿವೆ. 1 ರಿಂದ 12 ನೇ ತರಗತಿ ವರೆಗೆ ಎಲ್ಲಾ ಶಾಲೆಗಳು NCERT ಪುಸ್ತಕಗಳನ್ನೇ ಸೂಚಿಸಬೇಕು ಎಂದು NCPCR ಅಧ್ಯಕ್ಷೆ ಪ್ರಿಯಾಂಕಾ ಕಾನೂಂಗೊ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


