ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ, ಮನೆ ಬದಲಾವಣೆ ಎಲ್ಲಿಗೆ...?
ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಏ.22 ರ ವೇಳೆಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

ನವದೆಹಲಿ: ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಏ.22 ರ ವೇಳೆಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.
12, ತುಘ್ಲಕ್ ಲೇನ್ ನಿವಾಸವನ್ನು ರಾಹುಲ್ ಗಾಂಧಿ ತೊರೆದಿದ್ದಾರೆ. ಅವರ ನಿವಾಸದ ಎದುರು ನಿಂತಿದ್ದ 2 ಟ್ರಕ್ ಗಳ ಮೂಲಕ ತಮ್ಮ ವಸ್ತುಗಳನ್ನು, 10, ಜನ್ಪಥ್ ನಲ್ಲಿರುವ ತಮ್ಮ ತಾಯಿಯ ಮನೆಗೆ ವರ್ಗಾಯಿಸುತ್ತಿದ್ದಾರೆ.
ಶೀಘ್ರವೇ ರಾಹುಲ್ ಗಾಂಧಿ ಬಂಗಲೆಯಿಂದ ಹೊರನಡೆಯಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಂದು ಮನೆಗಾಗಿ ರಾಹುಲ್ ಗಾಂಧಿ ಹುಡುಕುತ್ತಿದ್ದು, ತಮ್ಮ ತಾಯಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಟ್ಟಿಗೆ ಇರುವ ಆಯ್ಕೆಯನ್ನೂ ರಾಹುಲ್ ಗಾಂಧಿ ಪರಿಗಣಿಸುತ್ತಿದ್ದಾರೆ.
ಇದನ್ನೂ ಓದಿ: ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ
ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆ ಮತ್ತು ಶಿಕ್ಷೆಯ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಏಪ್ರಿಲ್ 22 ರೊಳಗೆ ನಿವೇಶನವನ್ನು ಖಾಲಿ ಮಾಡುವಂತೆ ಲೋಕಸಭೆ ಸೆಕ್ರೆಟರಿಯೇಟ್ ಗಾಂಧಿ ಅವರಿಗೆ ನೋಟಿಸ್ ಕಳುಹಿಸಿತ್ತು.
ಕೆಲವು ವರ್ಷಗಳ ಹಿಂದೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನೀಡಲಾಗಿದ್ದ ಎಸ್ಪಿಸಿ ಭದ್ರತೆ ತೆಗೆದುಹಾಕಿದ್ದರಿಂದ ಅವರಿದ್ದ ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


