ದೆಹಲಿ: ಕಚೇರಿಗೆ ನುಗ್ಗಿ ಬಿಜೆಪಿ ನಾಯಕನ ಗುಂಡಿಕ್ಕಿ ಬರ್ಬರ ಹತ್ಯೆ!
ದೆಹಲಿಯ ಮಟಿಯಾಲ ರಸ್ತೆಯಲ್ಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರ ಕಚೇರಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನವದೆಹಲಿ: ದೆಹಲಿಯ ಮಟಿಯಾಲ ರಸ್ತೆಯಲ್ಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರ ಕಚೇರಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮಾಹಿತಿಯ ಪ್ರಕಾರ ನಿನ್ನೆ ಸಂಜೆ 7:45ರ ಸುಮಾರಿಗೆ ಸುರೇಂದ್ರ ಮಟಿಯಾಲ ಅವರನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿದ್ದ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಯಲ್ಲಿ ಹೆಲ್ಮೆಟ್ ಹಿಡಿದುಕೊಂಡು ಕಚೇರಿಯೊಳಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವುದು ಪತ್ತೆಯಾಗಿದೆ. ದುಷ್ಕರ್ಮಿಗಳು ಸುಮಾರು 8-10 ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ 4 ಗುಂಡುಗಳು ಸುರೇಂದ್ರ ಅವರಿಗೆ ತಗುಲಿವೆ ಎಂದು ಹೇಳಲಾಗುತ್ತಿದೆ.
ಘಟನೆ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕಚೇರಿಯೊಳಗಿದ್ದ ಜನರು ಗಾಯಗೊಂಡ ಸುರೇಂದ್ರ ಮಟಿಯಾಳ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಎಂದು ಘೋಷಿಸಿದರು. ಸುರೇಂದ್ರ ಅವರು ಸ್ಥಳೀಯ ಬಿಜೆಪಿ ನಾಯಕರಾಗಿದ್ದು, 2017ರಲ್ಲಿ ಕಾರ್ಪೊರೇಟರ್ ಚುನಾವಣೆಗೂ ಸ್ಪರ್ಧಿಸಿದ್ದರು.
ಸುರೇಂದ್ರ ಮಟಿಯಾಲ ಅವರ ಸೋದರ ಸಂಬಂಧಿ ಮತ್ತು ಪ್ರತ್ಯಕ್ಷದರ್ಶಿ ರಾಮ್ ಸಿಂಗ್ ಪ್ರಕಾರ, ದುಷ್ಕರ್ಮಿಗಳು ಘಟನೆ ನಡೆಸಿದಾಗ ಒಟ್ಟು 4 ಜನರು ಕಚೇರಿಯೊಳಗೆ ಇದ್ದರು. ಇದರಲ್ಲಿ ಸುರೇಂದ್ರ ಮಟಿಯಾಲ ಟಿವಿ ನೋಡುತ್ತಿದ್ದಾಗ ರಾಮ್ ಸಿಂಗ್ ಮತ್ತು ಇತರ ಇಬ್ಬರು ಕುಳಿತು ಮಾತನಾಡುತ್ತಿದ್ದರು. ಕಚೇರಿಯೊಳಗೆ ನುಗ್ಗಿದ ಇಬ್ಬರು ಗುಂಡು ಹಾರಿಸಲು ಆರಂಭಿಸಿದರು.
ಏನಾಗುತ್ತಿದೆ ಎಂದು ತಿಳಿಯುವ ಹೊತ್ತಿಗೆ ಸುರೇಂದ್ರ ಮಟಿಯಾಲ ಮೇಲೆ ಗುಂಡು ಹಾರಿಸಿದ್ದರು ಎಂದು ಅವರು ಹೇಳಿದರು. ಗಾಯಗೊಂಡ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪ್ರಯೋಜನವಾಗಲಿಲ್ಲ. ಸದ್ಯ ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿದ್ದು, ಕಚೇರಿ ಸುತ್ತಮುತ್ತ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


