ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪದಿಂದ 8 ಮಂದಿ ಸಾವು, 123 ಜನ ಅಸ್ವಸ್ಥ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಕನಿಷ್ಠ 7-8 ಜನ ಸಾವನ್ನಪ್ಪಿದ್ದಾರೆ....

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಕನಿಷ್ಠ 7-8 ಜನ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ.
ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾದ ಈ ಮೆಗಾ ಕಾರ್ಯಕ್ರಮದಲ್ಲಿ ಇಂದು 120ಕ್ಕೂ ಹೆಚ್ಚು ಜನ ಬಿಸಿಲಿನ ಝಳದಿಂದ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇವರಲ್ಲಿ ಹದಿಮೂರು ಜನರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಖಾರ್ಘರ್‌ನ 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅಪ್ಪಾಸಾಹೇಬ್ ಧರ್ಮಾಧಿಕಾರಿಯ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸರ್ಕಾರ ನೀಡುವ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧರ್ಮಾಧಿಕಾರಿಗೆ ಪ್ರದಾನ ಮಾಡಿದರು.
ಇಂದು ಬೆಳಗ್ಗೆಯಿಂದಲೇ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮತ್ತು ಬೆಳಗ್ಗೆ 11.30ರ ಸುಮಾರಿಗೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆವರೆಗೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


