ಭ್ರಷ್ಟಾಚಾರ ಆರೋಪ: ಅಣ್ಣಾಮಲೈಗೆ 500 ಕೋಟಿ ರೂ. ಲೀಗಲ್ ನೋಟಿಸ್ ನೀಡಿದ ಡಿಎಂಕೆ
ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಅದರ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧದ ಭ್ರಷ್ಟಾಚಾರ ಆರೋಪ ಮಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ 500 ಕೋಟಿ ರೂಪಾಯಿ ಲೀಗಲ್ ನೋಟಿಸ್...

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಅದರ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧದ ಭ್ರಷ್ಟಾಚಾರ ಆರೋಪ ಮಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ 500 ಕೋಟಿ ರೂಪಾಯಿ ಲೀಗಲ್ ನೋಟಿಸ್ ಜಾರಿಗೊಳಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.
ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್ಎಸ್ ಭಾರತಿ ಅವರ ಪರವಾಗಿ ನೀಡಲಾದ 10 ಪುಟಗಳ ಲೀಗಲ್ ನೋಟಿಸ್ನಲ್ಲಿ ಅಣ್ಣಾಮಲೈ ಅವರ ‘ಡಿಎಂಕೆ ಫೈಲ್ಸ್’ ಎಂಬ ಹೆಸರಿನಲ್ಲಿ, ಸ್ಟಾಲಿನ್ ಮತ್ತು ಇತರ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು “ಸುಳ್ಳು, ಆಧಾರರಹಿತ, ಮಾನಹಾನಿಕರ ಆರೋಪ ಮಾಡಿದ್ದಾರೆ” ಎಂದು ಹೇಳಿದೆ.
ಅಣ್ಣಾಮಲೈ ಅವರು ಸ್ಟಾಲಿನ್ ವಿರುದ್ಧ 200 ಕೋಟಿ ರೂ. ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಆದರೆ "ಡಿಎಂಕೆ ಅಧ್ಯಕ್ಷರು ತಮ್ಮ 56 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಯಾವುದೇ ವ್ಯಕ್ತಿಯಿಂದ ಒಂದು ಪೈಸೆ ಅಕ್ರಮವಾಗಿ ಪಡೆದಿಲ್ಲ" ಎಂದು ನೋಟಿಸ್ ಮೂಲಕ ತಿರುಗೇಟು ನೀಡಲಾಗಿದೆ.
ಅಣ್ಣಾಮಲೈ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಸ್ಟಾಲಿನ್ ಪರವಾಗಿ ಒತ್ತಾಯಿಸಿರುವ ಭಾರತಿ ಅವರು, ಸಾಮಾಜಿಕ ಮಾಧ್ಯಮ ಮತ್ತು ವೆಬ್ಸೈಟ್ನಿಂದ ಆರೋಪಗಳನ್ನು ಒಳಗೊಂಡ "ಆಕ್ಷೇಪಾರ್ಹ" ವೀಡಿಯೊಗಳನ್ನು ತೆಗೆದುಹಾಕಬೇಕು ಎಂದು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


