ಮಧ್ಯಪ್ರದೇಶ: ಕೋವಿಡ್ ನಲ್ಲಿ ಮೃತಪಟ್ಟ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್!
ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ.

ಮಧ್ಯಪ್ರದೇಶ: ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಕಮಲೇಶ್ ಮೃತಪಟ್ಟಿದ್ದಾರೆಂದು ಅಂತ್ಯಸಂಸ್ಕಾರ ಮುಗಿಸಿದ ಎರಡು ವರ್ಷಗಳ ನಂತರ ಅವರ ಮನೆಗೆ ಬಂದಿರುವುದಾಗಿ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ಕಮಲೇಶ್ ಕೋವಿಡ್ 19 ಎರಡನೇ ಅಲೆಯಲ್ಲಿ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಪ್ರಕಟಿಸಿದ್ದರು.
ಆಸ್ಪತ್ರೆಯವರು ಕಮಲೇಶ್ ಮೃತದೇಹವನ್ನು ನೀಡಿದ ನಂತರ ಕುಟುಂಬ ಸದಸ್ಯರು ಅಂತಿಮ ಸಂಸ್ಕಾರ ನಡೆಸಿದ್ದರು ಎಂದು ಅವರ ಸಂಬಂಧಿ ಮುಕೇಶ್ ಪಾಟಿದಾರ್ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಇದೀಗ ಕಮಲೇಶ್ ಮತ್ತೆ ಬದುಕಿ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಮಲೇಶ್ ಪಾಟಿದಾರ್ ಇಷ್ಟು ದಿನ ಎಲ್ಲಿದ್ದರು? ಆಸ್ಪತ್ರೆಯವರು ಅಂತ್ಯಕ್ರಿಯೆ ನಡೆಸಿದ ಮೃತದೇಹ ಯಾರದ್ದು? ಎಂಬೆಲ್ಲ ಪ್ರಶ್ನೆಗಳು ಮೂಡಿದ್ದು, ಕಣ್ವನ್ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


