ದೇಶ

'ಮೇಕ್ ಇನ್ ಇಂಡಿಯಾ'ದ ಜಾಗತಿಕ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

'ಮೇಕ್ ಇನ್ ಇಂಡಿಯಾ' ಜಾಗತಿಕ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ. ಮೊಜಾಂಬಿಕನ್ ಸಾರಿಗೆ ಸಚಿವ ಮಾಟಿಯುಸ್ ಮಗಾಲಾ ಅವರೊಂದಿಗೆ 'ಮೇಡ್ ಇನ್ ಇಂಡಿಯಾ' ರೈಲಿನಲ್ಲಿ ಸವಾರಿ ಮಾಡುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಈ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

'ಮೇಕ್ ಇನ್ ಇಂಡಿಯಾ'ದ ಜಾಗತಿಕ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: 'ಮೇಕ್ ಇನ್ ಇಂಡಿಯಾ' ಜಾಗತಿಕ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ. ಮೊಜಾಂಬಿಕನ್ ಸಾರಿಗೆ ಸಚಿವ ಮಾಟಿಯುಸ್ ಮಗಾಲಾ ಅವರೊಂದಿಗೆ 'ಮೇಡ್ ಇನ್ ಇಂಡಿಯಾ' ರೈಲಿನಲ್ಲಿ ಸವಾರಿ ಮಾಡುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್  ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಈ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

ಜೈಶಂಕರ್ ಅವರ ಟ್ವೀಟ್ ನ್ನು ಟ್ಯಾಗ್ ಮಾಡಿರುವ ಮೋದಿ, "ಇದು ಪ್ರತಿಯೊಬ್ಬ ಭಾರತೀಯರನ್ನು ಸಂತೋಷಪಡಿಸುತ್ತದೆ! ಜಾಗತಿಕ ಪ್ರಗತಿಯನ್ನು ಮೇಕ್ ಇನ್ ಇಂಡಿಯಾ ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.

'ಮೇಕ್ ಇನ್ ಇಂಡಿಯಾ' ಉಪಕ್ರಮವು ದೇಶದ ಆರ್ಥಿಕತೆಯನ್ನು ಉತ್ತೇಜಿಸುವ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಭಾರತದಲ್ಲಿ ತಮ್ಮ ಉತ್ಪನ್ನಗಳನ್ನು ಉತ್ಪಾದಿಸಲು ಕಂಪನಿಗಳನ್ನು ಉತ್ತೇಜಿಸಲು ಪ್ರಾರಂಭಿಸಿದ ಅಭಿಯಾನವಾಗಿದೆ.

ಈ ಉಪಕ್ರಮವು ತನ್ನ ಉದ್ದೇಶಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ ಮತ್ತು ವಿಶ್ವದಾದ್ಯಂತ ಮನ್ನಣೆ ಮತ್ತು ಸ್ವೀಕಾರವನ್ನು ಗಳಿಸಿದೆ ಎಂದು ಪ್ರಧಾನಿಯವರ ಹೇಳಿಕೆ ಸೂಚಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.