ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್
ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ.

ಮುಂಬೈ: ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಜಿತ್ ಪವಾರ್, "ನಾನು ಮಂಗಳವಾರದಂದು ಎನ್ ಸಿಪಿ ಶಾಸಕರ ಸಭೆಯನ್ನು ಕರೆದಿದ್ದೇನೆ ಎಂದು ಕೆಲವು ವರದಿಗಳು ಪ್ರಕಟವಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿ, ನಾನು ಶಾಸಕರ, ಪದಾಧಿಕಾರಿಗಳ ಸಭೆಯನ್ನು ಕರೆದಿಲ್ಲ ಎಂದು ಹೇಳಿದ್ದಾರೆ.
ಇನ್ನು ಎನ್ ಸಿಪಿ ಶಾಸಕರ ಕುರಿತು ವರದಿ ಪ್ರಕಟವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜ್ಯಸಭಾ ಸಂಸದ ಸಂಜಯ್ ರೌತ್, ಈ ವರದಿಗಳೆಲ್ಲಾ ಆಧಾರ ರಹಿತವಾಗಿರುವುದಾಗಿದ್ದು, ಅಜಿತ್ ಪವಾರ್ ಹಾಗೂ ಇನ್ನಿತರ ಎನ್ ಸಿಪಿ ನಾಯಕರೊಂದಿಗೆ ನಾನು ಮಾತನಾಡಿದ್ದೇನೆ. "ಇಂತಹ ಕುತಂತ್ರಗಳನ್ನು ಹರಡುವವರು ಮಹಾ ವಿಕಾಸ್ ಅಘಾಡಿ (ಎಂವಿಎ) ಅನ್ನು ದುರ್ಬಲಗೊಳಿಸಬಹುದು ಎಂದು ಭಾವಿಸಿದರೆ, ಅದು ತಪ್ಪು ಎಂದು ಹೇಳಿದ್ದಾರೆ.
ಶರದ್ ಪವಾರ್ ಹಾಗೂ ಅಜಿತ್ ಪವಾರ್ ಇತ್ತೀಚಿನ ದಿನಗಳಲ್ಲಿ ಅದಾನಿ, ಇವಿಎಂ ಸೇರಿದಂತೆ ಹಲವು ರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಬಗ್ಗೆ ಮೃದು ಧೋರಣೆಯಿಂದ ಮಾತನಾಡಿದ್ದು, ಎನ್ ಸಿಪಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರದ ಭಾಗವಾಗಲಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


