ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!
ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ.

ಮುಂಬೈ: ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ.
ಈಗ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿಯೊಂದಿಗೆ ಕೈ ಜೋಡಿಸಲು ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಸಂಜಯ್ ರೌತ್ ಇತ್ತೀಚೆಗೆ ಮಾತನಾಡಿ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ, ತಮ್ಮ ಪಕ್ಷ ಎಂದಿಗೂ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದರು.
ಆದರೆ ಇತ್ತ ಎನ್ ಸಿಪಿಯಲ್ಲಿನ ಅಜಿತ್ ಪವಾರ್ ಅವರ ಬೆಂಬಲಿಗ ಶಾಸಕರ ಪೈಕಿ ಇಬ್ಬರು ತಾವು ಅಜಿತ್ ಪವಾರ್ ಯಾವುದೇ ನಿರ್ಧಾರ ಕೈಗೊಂಡರೂ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಇನ್ನು ಎನ್ ಸಿಪಿಯ ಹಿರಿಯ ನಾಯಕ ಪುಣೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದನ್ನು ರದ್ದುಗೊಳಿಸಿ ದೆಹಲಿಗೆ ಏಕಾ ಏಕಿ ಭೇಟಿ ನೀಡಿದ್ದು ಹಲವು ಅನುಮಾನಗಳು, ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿವೆ.
ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 16 ಶಾಸಕರ ಅನರ್ಹತೆ ಅರ್ಜಿ ಸುಪ್ರೀಂ ಕೋರ್ಟ್ ಎದುರು ಬಾಕಿ ಇದ್ದು, ಎನ್ ಸಿಪಿಯ 34-53 ಶಾಸಕರು ಅಜಿತ್ ಪವಾರ್ ಬಿಜೆಪಿ ಜೊತೆ ಕೈ ಜೋಡಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


