ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ, ತಡೆಯಾಜ್ಞೆ ನೀಡಲು ಕೋರ್ಟ್ ನಕಾರ
ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಸೂರತ್: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.
ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ವಯನಾಡ್ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ರಾಹುಲ್ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಗುಜರಾತ್ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು.
ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


