ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ನಾಲ್ಕನೇ ಪ್ರಕರಣ
ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಚೆನ್ನೈ: ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಧ್ಯಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವರ್ಷದಲ್ಲಿ ವರದಿಯಾದ ನಾಲ್ಕನೇ ಪ್ರಕರಣವಾಗಿದೆ. 2018 ರಿಂದ ಆಗಿರುವ 12 ನೇ ಪ್ರಕರಣವಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ಪ್ರಾಥಮಿಕ ತನಿಖೆ ನಡೆಯುತ್ತಿದೆ ಎಂದು ಚೆನ್ನೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಇದಕ್ಕೂ ಮುನ್ನ ಏಪ್ರಿಲ್ 2 ರಂದು ಇದೇ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಎಚ್‌ಡಿ ವಿದ್ಯಾರ್ಥಿ ತಮಿಳುನಾಡಿನ ವೇಲಾಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


