ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ
ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಅಯೋಧ್ಯೆ: ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಗಾಯಾಳುಗಳನ್ನು ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಯೋಧ್ಯೆಯ ಹೊರವಲಯದ ಅಂಬೇಡ್ಕರ್ ನಗರದ ಬಳಿ ತಿರುವಿನಲ್ಲಿ ಖಾಸಗಿ ಬಸ್ ಒಂದು, ವೇಗವಾಗಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆತರುತ್ತಿದ್ದ ಬಸ್ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ.
ರಸ್ತೆ ಅಪಘಾತದಲ್ಲಿ ಇಲ್ಲಿಯವರೆಗೆ ಏಳು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಬಸ್‌ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
12ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿರುವವರನ್ನು ನಾವು ಸ್ಥಳಾಂತರಿಸುತ್ತಿದ್ದೇವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ" ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


