ದೇಶ

ದೆಹಲಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ್ ಭವನದಲ್ಲಿ ಬೆಂಕಿ ಅವಘಡ

ರಾಷ್ಟ್ರ ರಾಜಧಾನಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ ಭವನದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.

ದೆಹಲಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ್ ಭವನದಲ್ಲಿ ಬೆಂಕಿ ಅವಘಡ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ ಭವನದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇದಕ್ಕೂ ಮುನ್ನ ಏಪ್ರಿಲ್ 17 ರಂದು ರಾಷ್ಟ್ರ ರಾಜಧಾನಿಯಲ್ಲಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಫೋರ್ಸ್‌ನ ಪ್ರಧಾನ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಸಂಜೆ 6.50ರ ಸುಮಾರಿಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿದೆ. ಐದು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ಬಳಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ರಾಷ್ಟ್ರ ರಾಜಧಾನಿಯ ಲೋಧಿ ರಸ್ತೆ ಪ್ರದೇಶದಲ್ಲಿರುವ ಐಟಿಬಿಪಿ ಪ್ರಧಾನ ಕಚೇರಿಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 7.40 ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.