ಪ್ರಾಣ ಕೊಡಲು ಸಿದ್ಧ ಆದರೆ... ಬಿಜೆಪಿ ವಿರುದ್ಧ ಮಮತಾ ಕೆಂಡ!
ಬಿಜೆಪಿಯವರು ದ್ವೇಷದ ರಾಜಕೀಯ ಮೂಲಕ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಧರ್ಮದ ಹೆಸರಿನಲ್ಲಿ ದೇಶ ವಿಭಜನೆಗೆ ಬಿಡುವುದಿಲ್ಲ ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ ಎಂದಿದ್ದಾರೆ.

ಕೊಲ್ಕತ್ತಾ: ಬಿಜೆಪಿಯವರು ದ್ವೇಷದ ರಾಜಕೀಯ ಮೂಲಕ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಧರ್ಮದ ಹೆಸರಿನಲ್ಲಿ ದೇಶ ವಿಭಜನೆಗೆ ಬಿಡುವುದಿಲ್ಲ ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ ಎಂದಿದ್ದಾರೆ.
ಈದ್- ಉಲ್- ಫಿತ್ತರ್ ಅಂಗವಾಗಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಂಗಾಳದಲ್ಲಿ ಶಾಂತಿ ಬೇಕು, ಗಲಭೆಗಳು ಬೇಡ, ದೇಶ ವಿಭಜನೆ ಬೇಕಾಗಿಲ್ಲ ಎಂದರು. ದೇಶದಲ್ಲಿ ಒಡಕು ಸೃಷ್ಟಿಸಲು ಬಯಸುವರಿಗೆ ಈದ್‌ನಲ್ಲಿ ಭರವಸೆ ನೀಡುತ್ತೇನೆ. ನನ್ನ ಪ್ರಾಣವನ್ನು ನೀಡಲು ಸಿದ್ಧನಿದ್ದೇನೆ ಆದರೆ ದೇಶವನ್ನು ವಿಭಜಿಸಲು ಬಿಡಲ್ಲ. ನಮಗೆ ದಂಗೆ ಬೇಡ, ಘರ್ಷಣೆ ಬೇಡ, ಶಾಂತಿ ಬೇಕು ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವ ಹೋದರೆ, ಎಲ್ಲವೂ ಹೋಗುತ್ತದೆ. ಇಂದು ಸಂವಿಧಾನ, ಇತಿಹಾಸವನ್ನು ಬದಲಾಯಿಸಲಾಗುತ್ತಿದೆ. ಬಿಜೆಪಿಯವರು ಎನ್ ಆರ್ ಸಿ ಜಾರಿಗೆ ತಂದರು, ಆದರೆ, ನಾನು ಅವರಿಗೆ ಹಾಗೆ ಮಾಡಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಗುಡುಗಿದರು.
2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲಿನ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದ 11 ಅಪರಾಧಿಗಳ ಬಿಡುಗಡೆಯನ್ನು ಖಂಡಿಸಿದ ಮಮತಾ ಬ್ಯಾನರ್ಜಿ, ಬಿಲ್ಕಿಸ್ ಪ್ರಕರಣದಲ್ಲಿ ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ. ಆದರೆ ಇದನ್ನು ನಾವು ಸಹಿಸುವುದಿಲ್ಲ, ಹೋರಾಟ ಮಾಡಿ ಗೆಲ್ಲುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


