ದೇಶ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ಶ್ರೀನಗರದ ರಾಮ್ ಬಾಗ್ ಪ್ರದೇಶದಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‍ ಅವರ ಮಗನಿಗೆ ಸೇರಿದ ಮನೆಯನ್ನು ಸೋಮವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ
ಎನ್ಐಎ
Published On :

ಶ್ರೀನಗರ: ನಗರದ ರಾಮ್ ಬಾಗ್ ಪ್ರದೇಶದಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‍ ಅವರ ಮಗನಿಗೆ ಸೇರಿದ ಮನೆಯನ್ನು ಸೋಮವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ನ್ಯಾಯಾಲಯದ ಆದೇಶದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸೈಯದ್ ಅಹ್ಮದ್ ಶಕೀಲ್ ಹೆಸರಿನಲ್ಲಿ ಕಂದಾಯ ಇಲಾಖೆಯ ದಾಖಲೆಗಳಲ್ಲಿ ನೋಂದಾಯಿತ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮುಟ್ಟುಗೋಲು ಹಾಕಿಕೊಂಡಿರುವ ಸೂಚನಾ ಫಲಕವನ್ನು ಮನೆಯ ಹೊರಗೆ ಅಳವಡಿಸಲಾಗಿದೆ. 

ಪಾಕಿಸ್ತಾನದಲ್ಲಿ ನೆಲೆಸಿರುವ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹುದ್ದೀನ್‌ಗೆ ಸಂಬಂಧಿಸಿದ ಹೆಚ್ಚಿನ ಆಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.