ಬೇಷರತ್ ಕ್ಷಮೆಯಾಚನೆ: ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯಗೊಳಿಸಿದ 'ಸುಪ್ರೀಂ'
ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

ನವದೆಹಲಿ: ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.
ಭವಿಷ್ಯದಲ್ಲಿ ಲಲಿತ್ ಮೋದಿ ಅವರು ನ್ಯಾಯಾಂಗದ ವರ್ಚಸ್ಸಿಗೆ ಕಳಂಕ ತರುವಂತಹ ಯಾವುದೇ ಚಟುವಟಿಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ಮಂಗಳವಾರ ಲಲಿತ್ ಮೋದಿ ಅವರು ಬೇಷರತ್ ಕ್ಷಮೆ ಯಾಚಿಸಿದ್ದರು. ಸುಪ್ರೀಂಕೋರ್ಟ್ ಏಪ್ರಿಲ್ 13ರ ಆದೇಶದ ನಂತರ, ಅವರು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ಇಮೇಜ್‌ಗೆ ಕಳಂಕ ತಂದ ಟ್ವೀಟ್‌ಗಳಿಗೆ ಕ್ಷಮೆಯಾಚಿಸಿದ್ದರು.
ಲಲಿತ್ ಮೋದಿ ಸಲ್ಲಿಸಿದ ಅಫಿಡವಿಟ್ ಅನ್ನು ನ್ಯಾಯಮೂರ್ತಿ ಎಂಆರ್ ಷಾ ಮತ್ತು ನ್ಯಾಯಮೂರ್ತಿ ಸಿಟಿ ರವಿಕುಮಾರ್ ಅವರ ಪೀಠವು ಗಮನಕ್ಕೆ ತಂದಿತು. ಇದರಲ್ಲಿ ಅವರು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ನ್ಯಾಯಾಲಯದ "ವೈಭವ ಅಥವಾ ಘನತೆ"ಗೆ ಕುಂದು ತರುವಂತಹ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಲಲಿತ್ ಮೋದಿ, ನಾವು ಬೇಷರತ್ ಕ್ಷಮೆಯನ್ನು ಸ್ವೀಕರಿಸುತ್ತೇವೆ. ಭವಿಷ್ಯದಲ್ಲಿ ಭಾರತೀಯ ನ್ಯಾಯಾಂಗ ಮತ್ತು ನ್ಯಾಯಾಲಯಗಳ ಪ್ರತಿಷ್ಠೆಯನ್ನು ಹಾಳುಮಾಡುವ ಯಾವುದೇ ಕೆಲಸ ಮಾಡುವುದಿಲ್ಲ. ನಾವು ಮುಕ್ತ ಹೃದಯದಿಂದ ಬೇಷರತ್ತಾದ ಕ್ಷಮೆಯನ್ನು ಕೇಳುತ್ತೇನೆ, ಏಕೆಂದರೆ ನ್ಯಾಯಾಲಯವು ಯಾವಾಗಲೂ ಕ್ಷಮೆಯಾಚನೆಯನ್ನು ಸ್ವೀಕರಿಸುತ್ತದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


