ಪ್ರಕಾಶ್ ಸಿಂಗ್ ಬಾದಲ್ ನಿಧನ: 2 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರ್ಕಾರ!
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

ಅಮೃತಸರ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.
ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ.
ಇದನ್ನೂ ಓದಿ: ಪಂಜಾಬ್ ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ
ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರ ಗೌರವಾರ್ಥವಾಗಿ ಗೃಹ ವ್ಯವಹಾರಗಳ ಸಚಿವಾಲಯವು ಏಪ್ರಿಲ್ 26 ಮತ್ತು 27 ರಂದು ಭಾರತದಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ವೇಳೆ ರಾಷ್ಟ್ರ ಧ್ವಜ ಅರ್ಧ ಮಟ್ಟದಲ್ಲಿ ಹಾರಾಡಲಿದ್ದು, ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ಸೂಚಕವಾಗಿ ಎರಡು ದಿನಗಳ ರಾಜ್ಯ ಶೋಕಾಚರಣೆಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.
ತಮ್ಮ 94 ನೇ ವಯಸ್ಸಿನಲ್ಲಿ, ಬಾದಲ್ ಅವರು 13 ನೇ ಬಾರಿಗೆ ಚುನಾವಣೆ ಸ್ಪರ್ಧಿಸಿದಾಗ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿದ ದೇಶದ ಅತ್ಯಂತ ಹಿರಿಯ ಅಭ್ಯರ್ಥಿ ಎಂಬ ಕೀರ್ತಿಗೆ ಭಾಜನರಾಗಿದ್ದರು. ಆದರೆ ಮುಕ್ತಸರ್ ಜಿಲ್ಲೆಯ ಲಂಬಿಯಲ್ಲಿ ಅವರ ಗೆಲುವು ಸಾಧ್ಯವಾಗಲಿಲ್ಲ. ಅವರು ಸ್ಪರ್ಧಿಸಿದ 7 ಚುನಾವಣೆಗಳಲ್ಲಿ 5ರಲ್ಲಿ ಗೆದ್ದಿದ್ದು, 2 ಬಾರಿ ಸೋತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


