ಈಜುಕೊಳದಲ್ಲಿದ್ದ ಹಿರಿಯ ನಾಗರಿಕನ ಮೇಲೆ ಎತ್ತರದಿಂದ ಜಿಗಿದ ವ್ಯಕ್ತಿ; 72 ವರ್ಷದ ವೃದ್ಧ ಸಾವು
ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗೋರೆಗಾಂವ್ ಪ್ರದೇಶದ ಓಝೋನ್ ಈಜುಕೊಳದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.
ಮೃತರನ್ನು ವಿಷ್ಣು ಸಾಮಂತ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತರು ಈಜುತ್ತಿದ್ದ ವೇಳೆ 20 ವರ್ಷದ ಯುವಕನೊಬ್ಬ ಮೇಲಿನಿಂದ ಕೊಳದೊಳಗೆ ಧುಮುಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
'ಸಾಮಂತ್ ಅವರ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ. ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಸಂತ್ರಸ್ತರ ಪತ್ನಿ ನೀಡಿರುವ ದೂರಿನ ಮೇರೆಗೆ 20 ವರ್ಷದ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


