ದೇಶ

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆಯ ಅಗತ್ಯವಿದೆ: 'ಸುಪ್ರೀಂ'ಗೆ ದೆಹಲಿ ಪೊಲೀಸರು

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ...

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆಯ ಅಗತ್ಯವಿದೆ: 'ಸುಪ್ರೀಂ'ಗೆ ದೆಹಲಿ ಪೊಲೀಸರು
ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಪ್ರತಿಭಟನೆ ನಡೆಸಿದರು.
Published On :

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಬಯಸಿದರೆ ಪೊಲೀಸರು ತಕ್ಷಣ ಎಫ್‌ಐಆರ್ ದಾಖಲಿಸುತ್ತಾರೆ. ಆದರೆ ಕೆಲವು ಸಮಸ್ಯೆಗಳಿದ್ದು, ಪೊಲೀಸರು ಅದನ್ನು ಪರಿಶೀಲಿಸಲು ಬಯಸಿದ್ದಾರೆ ಎಂದು ದೆಹಲಿ ಪೊಲೀಸರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ.

“ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆ ನಡೆಸುವ ಅಗತ್ಯ ಇದೆ. ಕೋರ್ಟ್ ಆದೇಶ ನೀಡಿದರೆ ತಕ್ಷಣ ಎಫ್‌ಐಆರ್ ದಾಖಲಿಸಬಹುದು ” ಎಂದು ಮೆಹ್ತಾ ಅವರು ಸುಪ್ರೀಂ ಪೀಠಕ್ಕೆ ತಿಳಿಸಿದ್ದಾರೆ.

ತುಷಾರ್ ಮೆಹ್ತಾ ಅವರ ಮನವಿಯನ್ನು ಪರಿಗಣಿಸಿದ ಸುಪ್ರೀಂ ಪೀಠ, ಪ್ರಕರಣಗಳಲ್ಲಿ ಇದೇ ರೀತಿಯ ಅರ್ಜಿಗಳನ್ನು ಪರಿಗಣಿಸುವ ಮೊದಲು ಇತರ ಕಡೆಯ ದೃಷ್ಟಿಕೋನವನ್ನು ಕೋರುತ್ತೇವೆ. ಆದರೆ ಈ ಪ್ರಕರಣ ವಿಭಿನ್ನವಾಗಿರುವುದರಿಂದ, ಶುಕ್ರವಾರ ಅಫಿಡವಿಟ್ ಮೂಲಕ ನಿಮ್ಮ ನಿಲುವನ್ನು ಪ್ರಸ್ತುತಪಡಿಸುವಂತೆ ಸಿಜೆಐ ದೆಹಲಿ ಪೊಲೀಸರಿಗೆ ಸೂಚಿಸಿದೆ.

ನಿನ್ನೆ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಏಳು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.