ಬಿಹಾರ ಜೈಲು ನಿಯಮಗಳಿಗೆ ತಿದ್ದುಪಡಿ ನಂತರ ಮಾಜಿ ಸಂಸದ ಆನಂದ್ ಮೋಹನ್ ಜೈಲಿನಿಂದ ಬಿಡುಗಡೆ
ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪಾಟ್ನಾ: ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸಿಂಗ್ ಸೇರಿದಂತೆ 27 ಅಪರಾಧಿಗಳನ್ನು ಶೀಘ್ರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಇತ್ತೀಚೆಗೆ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಜೈಲು ಶಿಕ್ಷೆ ಪರಿಹಾರ ಆದೇಶದ ಅಡಿಯಲ್ಲಿ ಸಿಂಗ್ ಬಿಡುಗಡೆಗೆ ಅವಕಾಶ ನೀಡಲಾಗಿದೆ.
1994ರಲ್ಲಿ ಮುಜಾಫರ್ಪುರದ ದರೋಡೆಕೋರ ಚೋಟಾನ್ ಶುಕ್ಲಾ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಯುವ ಐಎಎಸ್ ಅಧಿಕಾರಿಯಾಗಿದ್ದ ಗೋಪಾಲ್ಗಂಜ್ ಕಲೆಕ್ಟರ್ ಜಿ ಕೃಷ್ಣಯ್ಯ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಆನಂದ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಕಳೆದ 15 ವರ್ಷಗಳಿಂದ ಜೈಲಿನಲ್ಲಿರುವ ಆನಂದ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇದನ್ನು ಓದಿ: ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ಅಕ್ಟೋಬರ್ 2007 ರಲ್ಲಿ ಸ್ಥಳೀಯ ನ್ಯಾಯಾಲಯ ಆನಂದ್ ಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಆನಂದ್ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್ ಡಿಸೆಂಬರ್ 2008 ರಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.
ನಿತೀಶ್ ಕುಮಾರ್ ಸರ್ಕಾರ, ಏಪ್ರಿಲ್ 10 ರಂದು, ಬಿಹಾರ ಜೈಲು ಕೈಪಿಡಿ, 2012 ಅನ್ನು ತಿದ್ದುಪಡಿ ಮಾಡಿತು ಮತ್ತು 'ಕರ್ತವ್ಯದಲ್ಲಿರುವ ಸಾರ್ವಜನಿಕ ಸೇವಕರ ಹತ್ಯೆ' ಪ್ರಕರಣದ ಅಪರಾಧಿಗಳಿಗೆ ಅವರ ಜೈಲು ಶಿಕ್ಷೆಯಲ್ಲಿ ವಿನಾಯತಿ ನೀಡಲಾಗುವುದಿಲ್ಲ ಎಂಬ ಷರತ್ತನ್ನು ತೆಗೆದುಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


