ದೇಶ

ಮೇ 10ರಂದು ಕರ್ನಾಟಕ ಜನ 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಅಂತ್ಯ ಹಾಡಲಿದ್ದಾರೆ: ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು

ಮೇ 10ರಂದು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕೊನೆಗೊಳಿಸಲಿದ್ದಾರೆ ಮತ್ತು ಕಾಂಗ್ರೆಸ್ ತಾನು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು 'ಕಾಂಗ್ರೆಸ್ ಪಕ್ಷವು ನಿಜವಾದ ಭರವಸೆಗಳನ್ನು ನೀಡಲು ಸಾಧ್ಯವಿಲ್ಲ' ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರುವಾರ ತಿರುಗೇಟು ನೀಡಿದೆ.

ಮೇ 10ರಂದು ಕರ್ನಾಟಕ ಜನ 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಅಂತ್ಯ ಹಾಡಲಿದ್ದಾರೆ: ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು
ಜೈರಾಮ್ ರಮೇಶ್
Published On :

ನವದೆಹಲಿ: ಮೇ 10ರಂದು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕೊನೆಗೊಳಿಸಲಿದ್ದಾರೆ ಮತ್ತು ಕಾಂಗ್ರೆಸ್ ತಾನು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು 'ಕಾಂಗ್ರೆಸ್ ಪಕ್ಷವು ನಿಜವಾದ ಭರವಸೆಗಳನ್ನು ನೀಡಲು ಸಾಧ್ಯವಿಲ್ಲ' ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರುವಾರ ತಿರುಗೇಟು ನೀಡಿದೆ. 

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಆ ಪಕ್ಷದ ವಾರಂಟಿ ಅವಧಿ ಮುಗಿದಿರುವಾಗ ಕಾಂಗ್ರೆಸ್‌ ನೀಡಿರುವ ಭರವಸೆಗಳ ಅರ್ಥವೇನು ಎಂದು ಪ್ರಶ್ನಿಸಿದ್ದರು.

ಈ ಟೀಕೆಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 'ಅಮಿತ್ ಶಾ ಮತ್ತು ಯೋಗಿ ನಂತರ, ಹತಾಶೆಯಿಂದ ಅತಿರೇಕದ ಕಾಮೆಂಟ್‌ಗಳನ್ನು ಮಾಡುವ ಸರದಿ ಈಗ ಮೋದಿಯವರದ್ದಾಗಿದೆ. ಮೇ 10ರಂದು ಕರ್ನಾಟಕದ ಜನರು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕೊನೆಗೊಳಿಸುವುದು ಗ್ಯಾರಂಟಿ' ಎಂದು ಟ್ವೀಟ್ ಮಾಡಿದ್ದಾರೆ.

ಕೆಲವು ದಿನಗಳ ನಂತರ ನಾವು ರಾಜಸ್ಥಾನ, ಛತ್ತೀಸಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಿದಂತೆ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದ ಅವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ಪಕ್ಷವು ನೀಡಿದ್ದ ಮತ್ತು ಜಾರಿ ಮಾಡಲಾದ ಭರವಸೆಗಳನ್ನು ಪಟ್ಟಿ ಮಾಡಿದ್ದಾರೆ.

ರಾಜಸ್ಥಾನದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿದೆ. ಹಳೆಯ ಪಿಂಚಣಿ ಯೋಜನೆ; ಇಂದಿರಾಗಾಂಧಿ ನಗರ ಉದ್ಯೋಗ-125 ದಿನಗಳ ಕೆಲಸ; ಆರೋಗ್ಯದ ಹಕ್ಕು- ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತುರ್ತು ಚಿಕಿತ್ಸೆ; ಚಿರಂಜೀವಿ ಯೋಜನೆ: ಖಾಸಗಿ ಆಸ್ಪತ್ರೆಗಳಲ್ಲಿ 25 ಲಕ್ಷ ರೂ. ವಿಮೆ ಮತ್ತು 10 ಲಕ್ಷ ರೂ. ಅಪಘಾತ ವಿಮೆ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ರಮೇಶ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

ಛತ್ತೀಸ್‌ಗಢ: ಸಾಲ ಮನ್ನಾ: 17.87 ಲಕ್ಷ ರೈತರ 9,270 ಕೋಟಿ ಸಾಲ ಮನ್ನಾ; ರೈತರಿಗೆ ಭತ್ತ ಕ್ವಿಂಟಾಲ್‌ಗೆ 2500 ರೂ.; ರಾಜೀವ್ ಗಾಂಧಿ ಕಿಸಾನ್ ನ್ಯಾಯ ಯೋಜನೆ: ರೈತರಿಗೆ ಎಕರೆಗೆ 9000 ರೂ. ಇನ್‌ಪುಟ್ ಸಬ್ಸಿಡಿ; ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಅದರಂತೆ ಹಿಮಾಚಲ ಪ್ರದೇಶದಲ್ಲಿಯೂ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎಂದಿದ್ದಾರೆ.

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೀಡಿದ್ದ ಚುನಾವಣಾ ಭರವಸೆಗಳು ಇನ್ನು ಖಾತರಿಗಳಾಗಿಯೇ ಉಳಿದಿವೆ ಎಂದು ವಾಗ್ದಾಳಿ ನಡೆಸಿದ್ದರು. 

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗ್ಯಾರಂಟಿ, ಸ್ವಜನಪಕ್ಷಪಾತದ ಗ್ಯಾರಂಟಿಯಾಗಿದ್ದು, ನಿಜವಾದ ಗ್ಯಾರಂಟಿ ಕೊಡಲಾಗದ ಸ್ಥಿತಿಗೆ ತಲುಪಿದೆ. ಕಾಂಗ್ರೆಸ್‌ನ ವಾರಂಟಿ ಮುಗಿದಿದೆ ಎಂಬುದು ನಿಮಗೆ ತಿಳಿದಿದೆ, ಹಾಗಾದರೆ ಅದರ ಖಾತರಿಗಳ ಅರ್ಥವೇನು ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.