ದೇಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 

ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಶನಿವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 
ಕಪಿಲ್ ಸಿಬಲ್
Published On :

ಜಬಲ್ಪುರ: ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಶನಿವಾರ ಹೇಳಿದ್ದಾರೆ.

ಕರ್ನಾಟಕ ಚುನಾವಣೆ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಿಂದ ಅಧಿಕಾರವನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದರು.

ವಿರೋಧ ಪಕ್ಷಗಳ ಮೈತ್ರಿ ಕುರಿತು ಒಂದು ಸಾಮಾನ್ಯ ಕಾರ್ಯಸೂಚಿ ಇರಬೇಕು. ಎಲ್ಲಾ ಪಕ್ಷಗಳು ಒಗ್ಗೂಡಬೇಕು ಮತ್ತು ಅಂತಹ ಮೈತ್ರಿಕೂಟ ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ವೈಯಕ್ತಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

75 ರ ವಯಸ್ಸಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದ ಸಿಬಲ್, ನಾನು ಕಾಂಗ್ರೆಸ್ ತೊರೆದಿದ್ದೇನೆ, ಆದರೆ ಅದರ ಸಿದ್ಧಾಂತವಲ್ಲ ಎಂದು ಹೇಳಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.