ಜಮ್ಮು: ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರ ನಿಯೋಜನೆ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ.
ಜಮ್ಮುವಿನ ಎಲ್ಲಾ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪುರುಷ ಪೊಲೀಸರೊಂದಿಗೆ ಮೊದಲ ಬಾರಿ ಮಹಿಳಾ ಸಿಬ್ಬಂದಿಯನ್ನೂ ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಮಹಿಳಾ ಮಾದಕವಸ್ತು ಕಳ್ಳಸಾಗಣೆದಾರರ ಮೇಲೆ ಕಣ್ಣಿಡಲು ಮತ್ತು ರಾತ್ರಿಯಲ್ಲಿ ಮಹಿಳೆಯರಿಗೆ ಸಹಾಯ ಮಾಡಲು ಜಮ್ಮು ನಗರದ ಚೆಕ್‌ಪೋಸ್ಟ್‌ಗಳಲ್ಲಿ ಮಹಿಳೆಯರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರನ್ನು ನೇಮಿಸಲಾಗಿದೆ ಅವರು ಹೇಳಿದ್ದಾರೆ.
ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸುತ್ತಾರೆ.
ಇಲ್ಲಿಯವರೆಗೆ, ಜಮ್ಮು ನಗರದ 12 ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳ ಮೇಲೆ ಕಣ್ಣಿಡಲು ಮಾತ್ರವಲ್ಲದೆ ಮಹಿಳೆಯರಿಗೆ, ವಿಶೇಷವಾಗಿ ರಾತ್ರಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಹಿಳಾ ಡ್ರಗ್ ಡೀಲರ್‌ಗಳ ಶಾಮೀಲಾಗಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್‌ಗಳ ನಿಯೋಜನೆಯಿಂದ ಅನುಮಾನಾಸ್ಪದ ಚಲನವಲನಗಳ ಮೇಲೆ ನಿಗಾ ಇಡಲು ಮತ್ತು ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


