ಜಮ್ಮು-ಕಾಶ್ಮೀರ: ರಜೌರಿ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!
ರಾಜೌರಿಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿದ್ದ ಅಪಘಾತದಲ್ಲಿ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಯೋಧರು ಗಾಯಗೊಂಡಿದ್ದಾರೆ.

ರಜೌರಿ(ಜಮ್ಮು ಮತ್ತು ಕಾಶ್ಮೀರ): ರಾಜೌರಿಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿದ್ದ ಅಪಘಾತದಲ್ಲಿ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಯೋಧರು ಗಾಯಗೊಂಡಿದ್ದಾರೆ.
ಗಡಿ ರೇಖೆ ಬಳಿ ಕೆರ್ರಿ ಸೆಕ್ಟರ್ ಬಳಿ ಅಪಘಾತ ಸಂಭವಿಸಿದೆ. ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಆಳವಾದ ಕಮರಿಗೆ ಬಿದ್ದಿತ್ತು. ಅಪಘಾತದ ಮಾಹಿತಿ ಸಿಕ್ಕ ತಕ್ಷಣ ಸೇನೆ, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಯಂತ್ರಣ ರೇಖೆ ಬಳಿಯ ಡುಂಗಿ ಗಾಲಾ ಬಳಿ ಆಂಬುಲೆನ್ಸ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಆಂಬ್ಯುಲೆನ್ಸ್ ಚಾಲಕ ಮತ್ತು ಜವಾನ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಅವರ ಮೃತದೇಹಗಳನ್ನು ರಕ್ಷಣಾ ಕಾರ್ಯಕರ್ತರು ನಾಲೆಯಿಂದ ಹೊರತೆಗೆದಿದ್ದಾರೆ.
ಕಳೆದ ವರ್ಷವೂ ಇಂತಹದ್ದೇ ಘಟನೆ ನಡೆದಿತ್ತು!
ಕಳೆದ ವರ್ಷ ಡಿಸೆಂಬರ್‌ನಲ್ಲಿ ಉತ್ತರ ಸಿಕ್ಕಿಂ ಬಳಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನವು ಸ್ಕಿಡ್ ಆಗಿ 16 ಸೇನಾ ಸಿಬ್ಬಂದಿ ಸಾವನ್ನಪ್ಪಿದರು. ಅಲ್ಲದೆ ನಾಲ್ವರು ಗಾಯಗೊಂಡಿದ್ದರು. ಈ ವಾಹನವು ಮೂರು ವಾಹನಗಳ ಬೆಂಗಾವಲಿನ ಭಾಗವಾಗಿತ್ತು. ಬೆಳಿಗ್ಗೆ ಚಟಾನ್‌ನಿಂದ ಥಾಂಗು ಕಡೆಗೆ ವಾಹನ ಚಲಿಸುತ್ತಿತ್ತು. ಗೆಮ್ಮಾಗೆ ಹೋಗುವ ದಾರಿಯಲ್ಲಿ ಅಪಘಾತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


