ದೇಶ

ಚೆನ್ನೈ ವಿಮಾನ ನಿಲ್ದಾಣದಲ್ಲಿ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯ ಬಂಧನ! ವಿಡಿಯೋ

ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿವಿಧ ಜಾತಿಯ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯ ಬಂಧನ! ವಿಡಿಯೋ
ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಂಡುಬಂದ ಹಾವುಗಳು
Published On :

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿವಿಧ ಜಾತಿಯ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 28 ರಂದು ಕೌಲಾಲಂಪುರದಿಂದ ಎಕೆ 13 ವಿಮಾನದಲ್ಲಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಹಿಳೆಯ ಲಗೇಜ್ ಬಗ್ಗೆ ಅನುಮಾನಗೊಂಡು ಕಸ್ಟಮ್ಸ್  ಅಧಿಕಾರಿಗಳು ಪರಿಶೀಲಿಸಿದಾಗ ಊಸರವಳ್ಳಿಯೊಂದಿಗೆ ವಿವಿಧ ಜಾತಿಯ 22 ಹಾವುಗಳು ಕಂಡುಬಂದಿವೆ.

ವನ್ಯಜೀವಿ ಸಂರಕ್ಷಣೆ ಕಾಯ್ದೆಯೊಂದಿಗೆ  ಸರೀಸೃಪಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯನ್ನು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.