ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ
ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

ನವದೆಹಲಿ: ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.
ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಮುರ್ಮು ಅವರಿಂದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದು, ರಾಷ್ಟ್ರಪತಿಗಳು ಬುಧವಾರ ಬೆಳಗ್ಗೆ 11.30ಕ್ಕೆ ಸಮಯಾವಕಾಶ ನೀಡಿದ್ದಾರೆ ಎಂದು ಪಕ್ಷದ ಮುಖಂಡರು ಮಂಗಳವಾರ ತಿಳಿಸಿದ್ದಾರೆ.
ಜುಲೈ 29-30 ರಂದು ಮಣಿಪುರಕ್ಕೆ ಭೇಟಿ ನೀಡಿದ ಇಂಡಿಯಾ ಒಕ್ಕೂಟದ 21 ಸಂಸದರನ್ನು ಸಹ ಒಳಗೊಂಡಿರುತ್ತದೆ. ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಒತ್ತಾಯಿಸುತ್ತಿವೆ ಮತ್ತು ಇತರ ಎಲ್ಲಾ ವಿಚಾರಗಳನ್ನು ಬದಿಗೊತ್ತು ನಿಯಮ 267 ರ ಅಡಿಯಲ್ಲಿ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ನಿಯಮ 176 ಅಡಿ ಅಲ್ಪಾವಧಿ ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಲು ಆಡಳಿತಾರೂಢ ಬಿಜೆಪಿ ಬಯಸಿದೆ.
ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ ಎಂದು ಹೇಳಿರುವ ವಿರೋಧ ಪಕ್ಷಗಳು ಇದೀಗ ಈ ವಿಷಯದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಕೋರಿವೆ. "ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಿದ್ದ 21 ಇಂಡಿಯಾ ಒಕ್ಕೂಟದ ಸಂಸದರು ಆಗಸ್ಟ್ 2 ರಂದು ಬೆಳಿಗ್ಗೆ 11- 30 ಗಂಟೆಗೆ ಭಾರತದ ರಾಷ್ಟ್ರಪತಿಗಳನ್ನು ಭೇಟಿಯಾಗಲಿದ್ದಾರೆ. ಅವರ ಜೊತೆ ಇಂಡಿಯಾ ಒಕ್ಕೂಟ ಪಕ್ಷಗಳ ಸದನಗಳ ನಾಯಕರು ಇರುತ್ತಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. .
ಮೇ 3 ರಂದು ಆರಂಭವಾದ ಹಿಂಸಾಚಾರದ ಬಗ್ಗೆ ಮಣಿಪುರದಲ್ಲಿ ಬಿರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಮಣಿಪುರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂಬ ಬೇಡಿಕೆಯನ್ನು ರಾಷ್ಟ್ರಪತಿಗಳ ಮುಂದೆ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ವಿರೋಧ ಪಕ್ಷಗಳು ತಿಳಿಸಿವೆ. ಅಲ್ಲದೇ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಅವರ ಮಧ್ಯಸ್ಥಿಕೆಯನ್ನು ಕೋರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


