ತೆಲುಗು ನಟಿ, ಮಾಜಿ ಶಾಸಕಿ ಜಯಸುಧಾ ಬಿಜೆಪಿ ಸೇರ್ಪಡೆ
ತೆಲುಗು ನಟಿ ಹಾಗೂ ಮಾಜಿ ಶಾಸಕಿ ಜಯಸುಧಾ ಅವರು ಬುಧವಾರ ನವದೆಹಲಿಯಲ್ಲಿ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದರು.

ನವದೆಹಲಿ: ತೆಲುಗು ನಟಿ ಹಾಗೂ ಮಾಜಿ ಶಾಸಕಿ ಜಯಸುಧಾ ಅವರು ಬುಧವಾರ ನವದೆಹಲಿಯಲ್ಲಿ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದರು.
ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಜಯಸುಧಾ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ತೆಲಂಗಾಣ ಉಸ್ತುವಾರಿ ತರುಣ್ ಚುಗ್ ಅವರನ್ನು ತೆಲುಗು ನಟಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.
“ಜಯಸುಧಾಜಿ ಅವರು ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜಿಯವರ ಯೋಜನೆಗಳು ಮತ್ತು ಕಾರ್ಯಗಳಿಂದ ಪ್ರಭಾವಿತರಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಾನು ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಜಿ ಮತ್ತು ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ" ಎಂದು ಚುಗ್ ಹೇಳಿದರು.
ಬಳಿಕ ಮಾತನಾಡಿದ ಜಯಸುಧಾ ಅವರು, "ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ದೇಶಕ್ಕೆ ಸೇವೆ ಸಲ್ಲಿಸಬೇಕಾಗಿದೆ. ಇಂದು ನಾವು ಭಾರತದಿಂದ ಹೊರಗೆ ಹೋದಾಗ, ಜನ ಭಾರತದ ಬಗ್ಗೆ ಮಾತನಾಡುತ್ತಾರೆ... ನಾವು ಇಂದು ಏನಾಗಿದ್ದೇವೆಯೋ ಅದು ಪ್ರಧಾನಿ ಮೋದಿಯವರಿಂದಾಗಿ" ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


