ಇಲ್ಲಿಯವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ: ಮಣಿಪುರ ಪೊಲೀಸರು
ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಇಂಫಾಲ: ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಜಿಲ್ಲೆಗಳಿಂದ 1,057 ಶಸ್ತ್ರಾಸ್ತ್ರಗಳು ಮತ್ತು ಗುಡ್ಡಗಾಡು ಜಿಲ್ಲೆಗಳಿಂದ 138 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸಾವಿರಾರು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಕಣಿವೆ ಜಿಲ್ಲೆಗಳಿಂದಲೇ ಅಧಿಕ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಲೂಟಿಯಾದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ಭದ್ರತಾ ಪಡೆಗಳು ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿವೆ ಎಂದು ಶನಿವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ.
ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; 15 ಮನೆಗಳಿಗೆ ಬೆಂಕಿ, ಓರ್ವ ವ್ಯಕ್ತಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಈವರೆಗೆ 160 ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ಮಣಿಪುರದ ಜನಸಂಖ್ಯೆಯ ಸುಮಾರು ಶೇ 53 ರಷ್ಟಿರುವ ಮೇಟಿ ಸಮುದಾಯಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿ ಸಮುದಾಯ ಶೇ 40 ರಷ್ಟಿದ್ದು, ಅವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


