ಚಿಪ್ಸ್ ಕದಿಯುವಾಗ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನನ್ನು ಥಳಿಸಿ, ಬೆತ್ತಲೆ ಮೆರವಣಿಗೆ; 7 ಮಂದಿ ಬಂಧನ
ಶಿಮ್ಲಾ ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.

ಶಿಮ್ಲಾ: ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.
ಜುಲೈ 31ರಂದು ನೇಪಾಳದ ಬಡ ಕುಟುಂಬದ ಅಪ್ರಾಪ್ತ ರೋಹ್ರು ಪಟ್ಟಣದಲ್ಲಿ ಕಳ್ಳತನದ ಆರೋಪದಲ್ಲಿ ಸಿಕ್ಕಿಬಿದ್ದ ನಂತರ 'ಅಮಾನುಷ' ಕೃತ್ಯ ಸಂಭವಿಸಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಜೀವ್ ಕುಮಾರ್ ಗಾಂಧಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಈಮಧ್ಯೆ, ಮರುದಿನ ಬಾಲಕನ ತಾಯಿ ಲಿವರ್ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಲಕನ ಮೆರವಣಿಗೆ ಮಾಡಿದ ವಿಡಿಯೋ ಘಟನೆಯ ಒಂದೆರಡು ದಿನಗಳ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ
ಕಾಣಿಸಿಕೊಂಡಿದ್ದು, ಬಾಲಕನ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಏಳು ಮಂದಿ ವಿರುದ್ಧ ಐಪಿಸಿಯ ಸೆಕ್ಷನ್ 341, 342 ಮತ್ತು 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 14 ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಇಂತಹ ಕ್ರೂರ ಕೃತ್ಯಗಳನ್ನು ಸಹಿಸುವುದು ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ.
ಹಲ್ಲೆ, ಅಕ್ರಮ ಬಂಧನ ಮತ್ತು ಅಪ್ರಾಪ್ತನನ್ನು ಬೆತ್ತಲೆ ಮೆರವಣಿಗೆ ಮಾಡಿದ್ದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಇದನ್ನು ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಹಂಚಿಕೊಂಡಿದ್ದಕ್ಕಾಗಿ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಗಾಂಧಿ ಹೇಳಿದರು.
ಆರೋಪಿಗಳಿಂದ ಎಂಟು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.
ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


