ತೆಲಂಗಾಣ: ಹೋರಾಟಗಾರ, ಕ್ರಾಂತಿಕಾರಿ ಗಾಯಕ ಗದ್ದರ್ ಇನ್ನಿಲ್ಲ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲಂಗಾಣದ ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಅವರು ಭಾನುವಾರ ನಿಧನರಾಗಿದ್ದಾರೆ.

ಹೈದರಾಬಾದ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲಂಗಾಣದ ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಅವರು ಭಾನುವಾರ ನಿಧನರಾಗಿದ್ದಾರೆ.
ಗದ್ದರ್ ಎಂದೇ ಖ್ಯಾತ ಪಡೆದಿದ್ದ ಕ್ರಾಂತಿಕಾರಿ ಗಾಯಕ 77 ವರ್ಷದ ಗುಮ್ಮಡಿ ವಿಠಲ್ ರಾವ್ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ತೀವ್ರ ಹೃದ್ರೋಗದಿಂದ ಬಳಲುತ್ತಿದ್ದ ಅವರು ಜುಲೈ 20 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 3 ರಂದು ಅವರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು ಮತ್ತು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿತ್ತು.
ಆದಾಗ್ಯೂ, ಅವರು ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.
1948 ರಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್ ಅವರು, 2010 ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ಅವರು ತೆಲಂಗಾಣ ಚಳವಳಿಗೆ ಸೇರ್ಪಡೆಗೊಂಡರು. ತೆಲಂಗಾಣದಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಹಕ್ಕುಗಳಿಗಾಗಿ ಗದ್ದರ್ ಹೋರಾಟ ಮಾಡಿದ್ದರು. ತಮ್ಮ ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದು, ಹೆಚ್ಚಿನ ಜನಮನ್ನಣೆ ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


