ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು
ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಅಧಿಕಾರಿಗಳ ಪ್ರಕಾರ, ರಾತ್ರಿ ಸುರಿದ ಭಾರೀ ಮಳೆಯಿಂದ ಗೋಡೆ ಕುಸಿದಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಮೃತರನ್ನು ಪ್ರವೀಣ್ ದಾಸ್ ಅವರ 12 ವರ್ಷದ ಮಗಳು ಕುಮಾರಿ ಸ್ನೇಹಾ ಮತ್ತು 10 ವರ್ಷದ ಮಗ ರಣವೀರ್ ಎಂದು ಗುರುತಿಸಲಾಗಿದೆ. ಅಪಘಡದಲ್ಲಿ ಪ್ರವೀಣ್ ಅವರ ತಂದೆಗೂ ಗಾಯಗಳಾಗಿವೆ.
"ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರೋಡಾ ಸೇತುವೆ ಕುಸಿದಿದ್ದು, ನೀರಿನಲ್ಲಿ ಕೊಚ್ಚಿಬಂದ ಸೇತುವೆಯ ಅವಶೇಷಗಳಿಂದ ಮನೆಯ ಗೋಡೆ ಕುಸಿದಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿ, ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಹೊರತೆಗೆದಿದ್ದಾರೆ ಎಂದು ತೆಹ್ರಿ ಗರ್ವಾಲ್ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಬ್ರಿಜೇಶ್ ಭಟ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


