ವಿಪಕ್ಷಗಳ ವಿರುದ್ಧ "ಕ್ವಿಟ್ ಇಂಡಿಯಾ" ಟೀಕಾ ಪ್ರಹಾರ ನಡೆಸಿದ ಪ್ರಧಾನಿ ಮೋದಿ
ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ದೇಶದ ಜನತೆ ಭ್ರಷ್ಟಾಚಾರ ಹಾಗೂ ತುಷ್ಟೀಕರಗಳಂತಹ ಅನಿಷ್ಟಗಳನ್ನು ದೇಶ ತೊರೆಯುವಂತೆ (ಕ್ವಿಟ್ ಇಂಡಿಯಾ) ಆಗ್ರಹಿಸುತ್ತಿದ್ದಾರೆ ಎಂದು ಮೋದಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಭಾರತ್ ಮಂಡಪಂ ನಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವದೇಶಿ ವಿಷಯದಲ್ಲಿ ದೇಶದಲ್ಲಿ ಹೊಸ ಕ್ರಾಂತಿ ಉಂಟಾಗಿದೆ ಎಂದು ಹೇಳಿರುವ ಅವರು, ಮುಂಬರುವ ಹಬ್ಬಗಳ ಸಾಲಿನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡಿ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ದೇಶವು 'ನವ-ಮಧ್ಯಮ ವರ್ಗ'ದ ಏರಿಕೆಗೆ ಸಾಕ್ಷಿಯಾಗಿದೆ, ಇದು ಜವಳಿ ಕಂಪನಿಗಳಿಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಇದೇ ವೇಳೆ ವಿಪಕ್ಷಗಳ ಮೈತ್ರಿಕೂಟ 'I.N.D.I.A', ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶ ಈಗ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ತುಷ್ಟೀಕರಣದಂತಹ ಕೆಟ್ಟ ಉದಾಹರಣೆಗಳನ್ನು ದೇಶ ಬಿಡುವಂತೆ ಹೇಳುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಖಾದಿಯನ್ನು ಹೆಚ್ಚು ಬಳಸಲು ಕರೆ ನೀಡಿರುವ ಪ್ರಧಾನಿ ಮೋದಿ, 2014 ಕ್ಕಿಂತಲೂ ಮೊದಲು 25,000-30,000 ಕೋಟಿ ರೂಪಾಯಿಗಳಷ್ಟಿದ್ದ ಮಾರಾಟ ಈಗ ಈಗ 1.30 ಲಕ್ಷ ಕೋಟಿಗೆ ಏರಿಕೆಯಾಗಿದೆ. ಭಾರತದ ಕೈಮಗ್ಗ, ಖಾದಿ, ಜವಳಿ ಕ್ಷೇತ್ರವನ್ನು ವಿಶ್ವಚಾಂಪಿಯನ್ ಆಗಿಸುವ ಪ್ರಯತ್ನ ನಮ್ಮದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


