ದೇಶ

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಭದ್ರತಾ ಪಡೆ ಸಾಂದರ್ಭಿಕ ಚಿತ್ರ
Published On :

ಪೊಂಚ್ :  ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ  ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  
ದೆಗ್ವಾರ್ ಸೆಕ್ಟರ್‌ನಲ್ಲಿ ಕೆಲವು ಭಯೋತ್ಪಾದಕರು ಭಾರತದ ಕಡೆಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ  ನಡೆಸಿದ್ದು,  ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ ಅವರ ದೇಹವನ್ನು ಘಟನಾ ಸ್ಥಳದಿಂದ ಇನ್ನೂ ಪಡೆಯಲಾಗಿಲ್ಲ ಎಂದು ಅವರು ಹೇಳಿದ್ದಾರೆ. 

ಸೇನೆಯ ಹೊಂಚುದಾಳಿ ತಂಡವು ಗರ್ಹಿ ಬೆಟಾಲಿಯನ್ ಪ್ರದೇಶದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಭಯೋತ್ಪಾದಕರ ಬಗ್ಗೆ ಸುಳಿವು ಪಡೆದು ಗುಂಡಿನ ಚಕಮಕಿ ನಡೆಸಿರುವುದಾಗಿ ಜಮ್ಮು ಮೂಲದ ರಕ್ಷಣಾ ಪಿಆರ್‌ಒ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ತಿಳಿಸಿದ್ದಾರೆ.  ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.