ರಾಷ್ಟ್ರಮಟ್ಟದಲ್ಲಿ ಮೋದಿಯಂತಹ ಬಲಿಷ್ಠ ನಾಯಕ ಮತ್ತೊಬ್ಬರಿಲ್ಲ: ಅಜಿತ್ ಪವಾರ್
ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ ಬಲಿಷ್ಠ ನಾಯಕ ಮತ್ತೊಬ್ಬರಿಲ್ಲ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಮುಂಬೈ: ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ ಬಲಿಷ್ಠ ನಾಯಕ ಮತ್ತೊಬ್ಬರಿಲ್ಲ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್, ಏಕನಾಥ್ ಶಿಂಧೆ-ಬಿಜೆಪಿ ಸಮ್ಮಿಶ್ರ ಸರ್ಕಾರಕ್ಕೆ ತಾವು ಸೇರಿದ ನಿರ್ಧಾರವನ್ನು ಕೆಲವರು ಟೀಕಿಸುತ್ತಿರಬಹುದು. ಆದರೆ ಒಬ್ಬ ವ್ಯಕ್ತಿಯು ತನ್ನ ಅನುಭವದ ಆಧಾರದ ಮೇಲೆ ವಿಭಿನ್ನ ಅಭಿಪ್ರಾಯವನ್ನು ಹೊಂದಬಹುದು ಎಂದಿದ್ದಾರೆ.
ಭಾನುವಾರ, ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಜಿತ್ ಪವಾರ್ ಅವರು "ದೀರ್ಘ ಸಮಯದ ನಂತರ ಸರಿಯಾದ ಜಾಗಕ್ಕೆ" ಬಂದಿದ್ದಾರೆ. ಆದರೆ ಅವರು "ತುಂಬಾ ತಡವಾಗಿ ಬಂದಿದ್ದಾರೆ" ಎಂದು ಹೇಳಿದ್ದರು.
ಇಂದು ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಪವಾರ್ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು, ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಕೆಲಸವನ್ನು ಪೂರ್ಣಗೊಳಿಸಲು ಶಿವಸೇನೆ-ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪುನರುಚ್ಚರಿಸಿದರು.
"ಇಂದು, ರಾಷ್ಟ್ರಮಟ್ಟದಲ್ಲಿ ನರೇಂದ್ರ ಮೋದಿಯವರಂತಹ ಬಲಿಷ್ಠ ನಾಯಕರು ನನಗೆ ಕಾಣಿಸುತ್ತಿಲ್ಲ. ಅವರಿಗೆ ಪರ್ಯಾಯ ನಾಯಕರು ಕಾಣುತ್ತಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


