ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಟ್ವಿಟರ್ ಬಯೋ ಬದಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ.
ಮಾರ್ಚ್‌ನಲ್ಲಿ ಲೋಕಸಭೆಯಿಂದ ಅನರ್ಹಗೊಂಡ ನಂತರ, ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಬಯೋವನ್ನು 'Dis'Qualified MP' ಎಂದು ಹಾಕಿಕೊಂಡಿದ್ದರು. ಇದೀಗ, ಹಿಂದಿನ ಬಯೋವನ್ನು 'Member of Parliament' ಎಂದು ಬದಲಾಯಿಸಿದ್ದಾರೆ.
ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಸದ್ಯ ರಾಹುಲ್ ಗಾಂಧಿಯವರ ಟ್ವಿಟರ್ ಬಯೋದಲ್ಲಿ 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು ಸಂಸತ್ ಸದಸ್ಯ' ಎಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


