ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.
ಲೋಕಸಭೆ ಸದಸ್ಯತ್ವ ಮರುಸ್ಥಾಪನೆಯಾದ ನಂತರ ಇದೇ ಮೊದಲ ಬಾರಿಗೆ ಅವರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, 'ಆಗಸ್ಟ್ 12-13 ರಂದು ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್‌ಗೆ ಭೇಟಿ ನೀಡಲಿದ್ದಾರೆ! ಪ್ರಜಾಪ್ರಭುತ್ವವು ಗೆದ್ದಿದೆ ಮತ್ತು ಸಂಸತ್ತಿಗೆ ತಮ್ಮ ಧ್ವನಿ ಮರಳಿದೆ ಎಂದು ವಯನಾಡಿನ ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ರಾಹುಲ್ ಜಿ ಕೇವಲ ಸಂಸದರು ಮಾತ್ರವಲ್ಲ ಅವರ ಕುಟುಂಬದ ಸದಸ್ಯ!' ಎಂದು ಹೇಳಿದ್ದಾರೆ.
'ಮೋದಿ' ಉಪನಾಮ ಟೀಕೆ ಕುರಿತ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ (ಆಗಸ್ಟ್ 4) ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು.
ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸಲ್ಲಿಸಿರುವ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಜುಲೈನಲ್ಲಿ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ಈ ಹಿಂದೆ ಗುಜರಾತ್ ಹೈಕೋರ್ಟ್, 'ಮೋದಿ ಉಪನಾಮ' ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಅವರಿಗೆ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


