ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸ್ ಎಫ್ಐಆರ್
ಮಣಿಪುರ ಪೊಲೀಸರು ಅಸ್ಸಾಂ ರೈಫಲ್ಸ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ

ಇಂಫಾಲ: ಮಣಿಪುರ ಪೊಲೀಸರು ಅಸ್ಸಾಂ ರೈಫಲ್ಸ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕಳೆದ ವಾರ ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾದ ಸಂದರ್ಭದಲ್ಲಿ ತಮ್ಮ ವಾಹನವನ್ನು ತಡೆದಿರುವ ಆರೋಪವನ್ನು ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಹೊರಿಸಿದ್ದಾರೆ.
ಮಣಿಪುರ ಪೊಲೀಸರು ಎಫ್ಐಆರ್ ನ್ನು ನ್ಯಾಯದ ಅಪಹಾಸ್ಯ ಎಂದು ಭದ್ರತಾ ಸಿಬ್ಬಂದಿಗಳು ಹೇಳಿದ್ದು, ಕುಕಿ ಮತ್ತು ಮೈಟೈ ಪ್ರದೇಶಗಳ ನಡುವಿನ ಬಫರ್ ವಲಯಗಳಲ್ಲಿ ಕಾಮಂಡ್ ಕೇಂದ್ರ ಕಚೇರಿ ನೀಡಿದ್ದ ಕರ್ತವ್ಯವನ್ನು ನಿರ್ವಹಿಸುತ್ತಿದ್ದುದ್ದಾಗಿ ಹೇಳಿದ್ದಾರೆ.
ಆಗಸ್ಟ್ 5 ರಂದು ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಗೋಥೋಲ್ ರಸ್ತೆಯಲ್ಲಿ ಅಸ್ಸಾಂ ರೈಫಲ್ಸ್ ಪೊಲೀಸ್ ವಾಹನಗಳನ್ನು ತಡೆದಿದೆ ಎಂದು ಪೊಲೀಸರು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದಾರೆ.
ಕುಕಿ ಉಗ್ರಗಾಮಿಗಳ ಹುಡುಕಾಟದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲು ರಾಜ್ಯ ಪೊಲೀಸರು ಕ್ವಾಕ್ಟಾದಲ್ಲಿರುವ ಫೋಲ್ಜಾಂಗ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
9 ಅಸ್ಸಾಂ ರೈಫಲ್ಸ್ ತಮ್ಮ ಕ್ಯಾಸ್ಪರ್ ವಾಹನವನ್ನು, ಸಿಬ್ಬಂದಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದರು ಎಂದು ಪೊಲೀಸರು ಹೇಳಿದ್ದಾರೆ. ಇಂಫಾಲದ ಸಚಿವಾಲಯದ ಮೂಲಗಳ ಪ್ರಕಾರ, ಸೇನೆ ಈ ಸಮಸ್ಯೆಯನ್ನು ರಾಜ್ಯ ಸರ್ಕಾರದೊಂದಿಗೆ ಉನ್ನತ ಮಟ್ಟದಲ್ಲಿ ಬಲವಾಗಿ ಪ್ರಸ್ತಾಪಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


