ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆ INDIA ಮೈತ್ರಿಕೂಟಗಳ ನಡುವೆ ನಂಬಿಕೆಯಿಲ್ಲ ಎಂಬುದನ್ನು ತೋರಿಸುತ್ತದೆ: ಪಿಎಂ ಮೋದಿ
ನಮ್ಮ ಸರ್ಕಾರ ವಿರುದ್ಧ ಪ್ರತಿಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯವು ಇಂಡಿಯಾ(I.N.D.I.A) ಮೈತ್ರಿಕೂಟದಲ್ಲಿ ಪಕ್ಷಗಳ ನಡುವೆ ಪರಸ್ಪರ ಅಪನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ನವದೆಹಲಿ: ನಮ್ಮ ಸರ್ಕಾರ ವಿರುದ್ಧ ಪ್ರತಿಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯವು ಇಂಡಿಯಾ(I.N.D.I.A)ಮೈತ್ರಿಕೂಟದಲ್ಲಿ ಪಕ್ಷಗಳ ನಡುವೆ ಪರಸ್ಪರ ಅಪನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ತಮ್ಮ ಪ್ರಸ್ತಾಪದೊಂದಿಗೆ ಯಾರು ಮತ್ತು ಯಾರು ಇಲ್ಲ ಎಂಬುದನ್ನು ಪರೀಕ್ಷಿಸಲು ಈ ಮೈತ್ರಿಕೂಟ ಮುಂದಾಗಿದೆ. ಅವರ ಮಧ್ಯೆಯೇ ಪರಸ್ಪರ ನಂಬಿಕೆಯಿಲ್ಲ ಎಂದು ಕಾಣಿಸುತ್ತಿದೆ ಎಂದಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷದ ಮೈತ್ರಿಯನ್ನು 'ಘಮಾಂಡಿಯಾ' (ದುರಹಂಕಾರದಿಂದ ಗುರುತಿಸಲಾಗಿದೆ) ಎಂದು ಬಣ್ಣಿಸಿದರು. ದೆಹಲಿ ಸೇವಾ ಮಸೂದೆಯ ಮೇಲೆ ಮತದಾನವನ್ನು ಸೆಮಿಫೈನಲ್ ನಲ್ಲಿ ಗೆಲುವು ಕಂಡಿದೆ ಎಂದು ಬಣ್ಣಿಸಿ ಅದಕ್ಕೆ ರಾಜ್ಯಸಭಾ ಸದಸ್ಯರನ್ನು ಅಭಿನಂದಿಸಿದರು.
ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಮೋದಿ, 2024ರ ಲೋಕಸಭೆ ಚುನಾವಣೆಗೆ ಮೊದಲು ರಾಜ್ಯಸಭೆಯಲ್ಲಿ ಮತದಾನವನ್ನು ಸೆಮಿಫೈನಲ್ ಎಂದು ಬಣ್ಣಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಶಾಹಿಯ ಮೇಲೆ ಕೇಂದ್ರದ ನಿಯಂತ್ರಣವನ್ನು ನೀಡುವ ವಿವಾದಾತ್ಮಕ ಕ್ರಮವನ್ನು ರಾಜ್ಯಸಭೆ ಅಂಗೀಕರಿಸಿದ ನಂತರ ದೆಹಲಿ ಸೇವಾ ಮಸೂದೆ ಸೋಮವಾರ ಸಂಸತ್ತಿನ ಅನುಮೋದನೆಯನ್ನು ಪಡೆದುಕೊಂಡಿದೆ. ಲೋಕಸಭೆಯಲ್ಲಿ ಆಡಳಿತ ಪಕ್ಷವು ಬಹುಮತ ಹೊಂದಿರುವುದರಿಂದ ಅವಿಶ್ವಾಸ ನಿರ್ಣಯವನ್ನು ಸೋಲಿಸುವುದು ಖಚಿತವೆಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


