ದೇಶ

ಕೇರಳ ವಿಧಾನಸಭೆಯಲ್ಲಿ ರಾಜ್ಯದ ಹೆಸರು 'ಕೇರಳಂ' ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ

ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಕೇರಳ ವಿಧಾನಸಭೆಯಲ್ಲಿ ರಾಜ್ಯದ ಹೆಸರು 'ಕೇರಳಂ' ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ
ಕೇರಳ ವಿಧಾನಸಭೆ
Published On :

ತಿರುವನಂತಪುರಂ: ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲೂ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯವನ್ನು ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯುತ್ತಾರೆ. ಆದರೆ ಇತರ ಭಾಷೆಗಳಲ್ಲಿ ಅದು ಇನ್ನೂ ಕೇರಳ ಎಂದು ಇದೆ ಎಂದು ಪಿಣರಾಯಿ ಹೇಳಿದರು.

ಸಂವಿಧಾನದ ಮೊದಲ ಶೆಡ್ಯೂಲ್‌ನಲ್ಲಿ ರಾಜ್ಯದ ಹೆಸರನ್ನು 'ಕೇರಳ' ಎಂದು ಪಟ್ಟಿ ಮಾಡಲಾಗಿದೆ.

"ಈ ಸದನವು ಸಂವಿಧಾನದ 3ನೇ ಪರಿಚ್ಛೇದದ ಅಡಿಯಲ್ಲಿ 'ಕೇರಳಂ' ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ 'ಕೇರಳಂ' ಎಂದು ಮರುನಾಮಕರಣ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ" ಎಂದು ವಿಜಯನ್ ಹೇಳಿದರು.

ಸ್ಪೀಕರ್ ಎಎನ್ ಶಂಸೀರ್ ಅವರು, ಸದಸ್ಯರು ಕೈ ಎತ್ತುವ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ ಎಂದು ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.