ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ದಿನವೇ ಮತ್ತೊಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಗುವಾಹಟಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಆಗಸ್ಟ್ 9 ರ (ಬುಧವಾರ) ಸಂಜೆ 4.30ಕ್ಕೆ ಬಿಷ್ಣುಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಎಫ್‌ಐಆರ್ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆಪಾದಿತ ಅಪರಾಧದ ಸ್ಥಳವು ಚುರಾಚಂದ್‌ಪುರ ಜಿಲ್ಲೆಯಲ್ಲಿರುವುದರಿಂದ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಚುರಾಚಂದ್‌ಪುರದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಎಫ್ಐಆರ್ ಪ್ರಕಾರ, ಐಪಿಸಿ ಸೆಕ್ಷನ್ 376D (ಗ್ಯಾಂಗ್ ರೇಪ್), 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 120B (ಅಪರಾಧ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ.
ಬಹುಸಂಖ್ಯಾತ ಕುಕಿ ಸಮುದಾಯದವರೇ ಇರು ಚುರಾಚಂದ್‌ಪುರದಲ್ಲಿ ನೆಲೆಸಿದ್ದ ಸಾವಿರಾರು ಮೈತೇಯಿ ಸಮುದಾಯದ ಕುಟುಂಬಗಳು ಹಿಂಸಾಚಾರದ ಹಿನ್ನೆಲೆಯಲ್ಲಿ ಇಂಫಾಲ್ ಕಣಿವೆಗೆ ಪಲಾಯನಗೈದಿದ್ದರು. ಅವರಲ್ಲಿ ಹಲವರು ಈಗ ಬಿಷ್ಣುಪುರ ಜಿಲ್ಲೆಯ ವಿವಿಧ ಪರಿಹಾರ ಶಿಬಿರಗಳಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


