ದೇಶದಲ್ಲಿ 'ಭಾರತ್ ಮಾತಾ' ಎನ್ನುವುದೇ ಇತ್ತೀಚೆಗೆ ಅಸಂಸದೀಯ ಪದವಾಗಿದೆ: ರಾಹುಲ್ ಗಾಂಧಿ
ಸ್ಪಷ್ಟವಾಗಿ ಹೇಳಬೇಕೆಂದರೆ ಭಾರತದಲ್ಲಿ ಇಂದಿನ ದಿನಗಳಲ್ಲಿ ಭಾರತ್ ಮಾತಾ ಎನ್ನುವುದೇ ಅಸಂಸದೀಯ ಪದವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಸ್ಪಷ್ಟವಾಗಿ ಹೇಳಬೇಕೆಂದರೆ ಭಾರತದಲ್ಲಿ ಇಂದಿನ ದಿನಗಳಲ್ಲಿ ಭಾರತ್ ಮಾತಾ ಎನ್ನುವುದೇ ಅಸಂಸದೀಯ ಪದವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣವನ್ನು ಸ್ಪೀಕರ್ ಓಂಬಿರ್ಲಾ, ಭಾಗಶಃ ಕಡತದಿಂದ ಕಿತ್ತುಹಾಕಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ರಾಹುಲ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಇಂಡಿಯಾ ವಿರೋಧ ಪಕ್ಷಗಳ ಕೂಟದ ಪರವಾಗಿ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವ ಮುನ್ನ ಸಂಸತ್ತಿನಿಂದ ಹೊರನಡೆದ ರಾಹುಲ್, ಪ್ರಧಾನಿ ಭಾಷಣವಾಗುತ್ತಿದ್ದಾಗ ವಾಪಸ್ಸಾದರು.
ಅವಿಶ್ವಾಸ ನಿರ್ಣಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡುವುದಕ್ಕೂ ಮುನ್ನ ಸಂಸತ್ನಿಂದ ಹೊರನಡೆದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


