ದೇಶ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಗಳ ಮುಖಾಮುಖಿ ಡಿಕ್ಕಿ, 10 ಮಂದಿ ದುರ್ಮರಣ

ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಗಳ ಮುಖಾಮುಖಿ ಡಿಕ್ಕಿ, 10 ಮಂದಿ ದುರ್ಮರಣ
ಸಂಗ್ರಹ ಚಿತ್ರ
Published On :

ಅಹಮದಾಬಾದ್: ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಸುಮಾರು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ವೊಂದು ಹೆದ್ದಾರಿಯಲ್ಲಿ ನಿಂತಿತ್ತು. ಈ ಸಂದರ್ಭದಲ್ಲಿ ಬಂದ ಮತ್ತೊಂದು ಟ್ರಕ್, ಮಿನಿ ಟ್ರಕ್'ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಚೋಟಿಲಾಗೆ ತೆರಳಿದ್ದ ಮಿನಿ ಟ್ರಕ್ ಅಹಮದಾಬಾದ್'ಗೆ ಬರುತ್ತಿತ್ತು. ಈ ವೇಳೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.