ದೇಶ

'ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ': ಪ್ರಧಾನಿ ನರೇಂದ್ರ ಮೋದಿ

ಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ': ಪ್ರಧಾನಿ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ
Published On :

ನವದೆಹಲಿ: ಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಲೋಕಸಭೆಯಲ್ಲಿ ನಿನ್ನೆ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಮೋದಿ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಮಣಿಪುರದ ಜನರಿಗೆ ಭರವಸೆ ನೀಡಿದರು. ಮಹಿಳೆಯರ ವಿರುದ್ಧದ ಘೋರ ಅಪರಾಧಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದರು. 

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ದುಃಖಕರವಾಗಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಸ್ವೀಕಾರಾರ್ಹವಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದರು. 

ಈಶಾನ್ಯವು ನಮ್ಮ ಜಿಗರ್ ಕಾ ತುಕ್ಡಾ (ನಮ್ಮ ಹೃದಯದ ತುಂಡು) ಮಣಿಪುರದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಆರಂಭವಾದಂತೆ ಮಾತನಾಡುತ್ತಿದ್ದಾರೆ. ನಾವು ಒಟ್ಟಾಗಿ ಈ ಸವಾಲಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಪ್ರತಿಪಕ್ಷಗಳು ತಮ್ಮ ಭಾಷಣದ ಮಧ್ಯದಲ್ಲಿ ಸಭಾತ್ಯಾಗ ಮಾಡಿದ ನಂತರ ಪ್ರಧಾನಿ ಹೇಳಿದರು.

ಮಣಿಪುರದಲ್ಲಿ ಶೀಘ್ರದಲ್ಲೇ ಶಾಂತಿ ನೆಲೆಸಲಿದೆ ಎಂದು ದೇಶದ ಎಲ್ಲಾ ನಾಗರಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ, ಮಣಿಪುರದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ, ದೇಶವು ನಿಮ್ಮೊಂದಿಗಿದೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ, ಸಂಸತ್ತು ನಿಮ್ಮೊಂದಿಗಿದೆ ಎಂದು ಮೋದಿ ಹೇಳಿದರು.

ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಮಣಿಪುರದ ಪರಿಸ್ಥಿತಿಯ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ್ದರು. ಅಲ್ಲಿ ಶಾಂತಿ ನೆಲೆಸುತ್ತದೆ. ಮಣಿಪುರ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ನಡೆಯುವಂತೆ ನೋಡಿಕೊಳ್ಳುವ ಪ್ರಯತ್ನ ಬಿಡುವುದಿಲ್ಲ ಎಂದಿದ್ದಾರೆ. 
ಕಾಂಗ್ರೆಸ್ ಮತ್ತು ಅದರ ರಾಜಕೀಯ ಈಶಾನ್ಯದ ಎಲ್ಲಾ ಸಮಸ್ಯೆಗಳಿಗೆ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಕಾಲವನ್ನು ಸ್ಮರಿಸಿದ ಅವರು, ಪ್ರತಿಯೊಂದು ಸಂಸ್ಥೆಗಳು ಉಗ್ರಗಾಮಿ ಸಂಘಟನೆಗಳ ಅಟ್ಟಹಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರ ಹಾಕುವುದನ್ನು ನಿಷೇಧಿಸಲಾಗಿತ್ತು.  ಮೊಯಿರಾಂಗ್‌ನ ಆಜಾದ್ ಹಿಂದ್ ಫೌಜ್ ಮ್ಯೂಸಿಯಂನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯ ಮೇಲೆ ನಡೆದ ಬಾಂಬ್ ಸ್ಫೋಟದ ಬಗ್ಗೆಯೂ ಮೋದಿ ಪ್ರಸ್ತಾಪಿಸಿದರು.

ಪ್ರಸ್ತುತ ಸರ್ಕಾರದಲ್ಲಿ ಸಚಿವರು ಈಶಾನ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ 400 ರಾತ್ರಿ ತಂಗಿದ್ದಾರೆ ಮತ್ತು ಅವರೇ 50 ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ನಾನು ಈಶಾನ್ಯ ರಾಜ್ಯದೊಂದಿಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿದ್ದೇನೆ. ಪ್ರಧಾನಿಯಾಗುವುದಕ್ಕೂ ಮುನ್ನ ನಾನು ಈ ಪ್ರದೇಶದಾದ್ಯಂತ ಪ್ರವಾಸ ಮಾಡಿದ್ದೇನೆ ಎಂದರು.

ಸಾರ್ವತ್ರಿಕ ಚುನಾವಣೆ 2024ಕ್ಕೆ ಇನ್ನು ಕೇವಲ ಎಂಟು ತಿಂಗಳುಗಳು ಬಾಕಿ ಇರುವಾಗ, ಪ್ರತಿಪಕ್ಷಗಳು ಸದನದಿಂದ ಸಭಾತ್ಯಾಗ ಮಾಡಿದ ನಂತರ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತದಿಂದ ಮೋದಿ ಸರ್ಕಾರ ನಿನ್ನೆ ಸೋಲಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.