ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಗುಂಡಿಕ್ಕಿ ಪಾಕಿಸ್ತಾನಿ ನುಸುಳುಕೋರನ ಹತ್ಯೆ: ಬಿಎಸ್‌ಎಫ್
ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಂಜಾಬ್: ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತರ್ನ್ ತರನ್ ಜಿಲ್ಲೆಯ ತೆಕಲನ್ ಗ್ರಾಮದ ಐಬಿ ಬಳಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಪಡೆಗಳು,ಆತನಿಗೆ ಗುಂಡಿಕ್ಕಿ ಸ್ಥಳದಲ್ಲಿಯೇ ಹತ್ಯೆ ಮಾಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಜುಲೈನಲ್ಲಿ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಪಡೆಗಳು ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದರಿಂದ ಪಾಕಿಸ್ತಾನದ ಒಳನುಸುಳುಕೋರನೊಬ್ಬ ಸಾವನ್ನಪ್ಪಿದ್ದ.
ಅರ್ನಿಯಾ ಸೆಕ್ಟರ್‌ನ ಜಬೋವಾಲ್ ಗಡಿ ಹೊರಠಾಣೆ ಬಳಿ ಗಡಿ ಬಳಿ ಪದೇ ಪದೇ ಮಾಡಲಾದ ಮನವಿಯನ್ನು ನಿರ್ಲಕ್ಷಿಸಿ ಗಡಿ ತಂತಿ ಬೇಲಿ ದಾಟಿ ಪಲಾಯನ ಮಾಡಲು ಪ್ರಯತ್ನಿಸಿದ ನಂತರ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಬಿಎಸ್ ಎಫ್ ಮಾಹಿತಿ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


