ವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ
ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ನವದೆಹಲಿ: ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.
ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದ್ದು, ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಿ ಎಂದು ಅರ್ಜಿಯನ್ನು ವಜಾಗೊಳಿಸಿದೆ.
26 ರಾಜಕೀಯ ಪಕ್ಷಗಳ ಮೈತ್ರಿಗೆ ನೀಡಿರುವ INDIA ಹೆಸರನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ನ್ಯಾ. ಎಸ್‌ಕೆ ಕೌಲ್ ನೇತೃತ್ವದ ಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿ ಸಲ್ಲಿಸಲು ಯಾರು ನೀವು? ನಿಮ್ಮ ಆಸಕ್ತಿ ಏನು? ಎಂದು ಪೀಠ ಕೇಳಿತು. ಅಲ್ಲದೆ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಚುನಾವಣಾ ಆಯೋಗಕ್ಕೆ (Election commission) ಹೋಗಿ ದೂರು ನೀಡಿ. ಅದು ಬಿಟ್ಟು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸರಿಯಲ್ಲ. ನಿಮಗೆ ಸಂಪೂರ್ಣ ಪ್ರಚಾರ ಬೇಕು ಎಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಆದರೆ ನಾವು ಇದನ್ನು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದ್ದು, ಪ್ರಚಾರ ಬೇಕಿದ್ದರೆ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ನೀಡುತ್ತಿದ್ದರು. ಆದರೆ ಅವರು ಅವುಗಳಿಂದ ದೂರವಿದ್ದಾರೆ ಎಂದು ವಾದಿಸಿದರು. ಹೆಸರನ್ನು ಬಳಸುವುದು ನೈತಿಕತೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದಕ್ಕೆ ನ್ಯಾ. ಕೌಲ್, ನಾವು ರಾಜಕೀಯದಲ್ಲಿ ನೈತಿಕತೆಯನ್ನು ನಿರ್ಧರಿಸಲು ಹೋಗುವುದಿಲ್ಲ ಎಂದು ಉತ್ತರಿಸಿ ಭಾರತೀಯ ಚುನಾವಣಾ ಆಯೋಗದ ಮುಂದೆ ಅರ್ಜಿಗಳನ್ನು ಸಲ್ಲಿಸಿ ಎಂದು ಸೂಚಿಸಿತು. ಸುಪ್ರೀಂ ಸೂಚನೆಯ ಬೆನ್ನಲ್ಲೇ ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


