ಹರ್ಯಾಣ ಗಲಭೆ ಕುರಿತು ಪ್ರಚೋದನಕಾರಿ ಪೋಸ್ಟ್; ಟಿವಿ ಚಾನೆಲ್ ಎಡಿಟರ್ ಬಂಧನ
ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಗುರುಗ್ರಾಮ: ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಹರ್ಯಾಣದ ಸ್ಥಳೀಯ ಸುದರ್ಶನ್ ನ್ಯೂಸ್ ಸಂಪಾದಕ ಹಾಗೂ ಟಿವಿ ಚಾನೆಲ್‌ನ ವ್ಯವಸ್ಥಾಪಕ ಸಂಪಾದಕ ಮುಖೇಶ್ ಕುಮಾರ್ ಎಂಬುವವರನ್ನು ಗುರುಗ್ರಾಮ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹರ್ಯಾಣದ ನುಹ್ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಆಪಾದಿತ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಹಿನ್ನಲೆಯಲ್ಲಿ ಗುರುಗ್ರಾಮ್ ಸೈಬರ್ ಠಾಣೆ ಪೂರ್ವ ಪೊಲೀಸರು ಮುಖೇಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತ್ ಮೆರವಣಿಗೆಯ ಮೇಲೆ ದಾಳಿ ಮಾಡಿದ ನಂತರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಈ ವರೆಗೂ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, 100ಕ್ಕೂ ಅಧಿಕ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


