ದೇಶ

ಭಾರತೀಯ ನ್ಯಾಯ ಸಂಹಿತೆ ಮಸೂದೆ: ಸುಳ್ಳು ಸುದ್ದಿ ಹರಡುವವರಿಗೆ 3 ವರ್ಷ ಜೈಲು ಶಿಕ್ಷೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಅನ್ನು ಮಂಡಿಸಿದ್ದು, ಸುಳ್ಳು ಸುದ್ದಿ ಹರಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.

ಭಾರತೀಯ ನ್ಯಾಯ ಸಂಹಿತೆ ಮಸೂದೆ: ಸುಳ್ಳು ಸುದ್ದಿ ಹರಡುವವರಿಗೆ 3 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಅನ್ನು ಮಂಡಿಸಿದ್ದು, ಸುಳ್ಳು ಸುದ್ದಿ ಹರಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.

ಪ್ರಸ್ತಾವಿತ ಮಸೂದೆಯನ್ನು ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ. ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರುವಂತಹ 'ನಕಲಿ ಸುದ್ದಿ ಅಥವಾ ತಪ್ಪು ಮಾಹಿತಿಗಳನ್ನು' ಹರಡುವವರಿಗೆ ಸೆಕ್ಷನ್ 195 ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದೆ.

ಸೆಕ್ಷನ್ 195(1) ಡಿ ಪ್ರಕಾರ, "ಭಾರತದ ಸಾರ್ವಭೌಮತೆ ಏಕತೆ ಮತ್ತು ಸಮಗ್ರತೆ ಅಥವಾ ಭದ್ರತೆಗೆ ಧಕ್ಕೆ ತರುವಂತಹ ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಸಿದ್ಧಪಡಿಸಿದರೆ ಅಥವಾ ಪ್ರಕಟಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ" ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಹೊಸ ಮಸೂದೆಯು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಕೊಲೆಗಳು ಮತ್ತು ದೇಶವಿರೋಧಿ ಅಪರಾಧಗಳ ಕಾನೂನುಗಳಿಗೆ ಆದ್ಯತೆ ನೀಡುತ್ತದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದು, ಇದು ನ್ಯಾಯವನ್ನು ನೀಡುವ ಮತ್ತು ಸಂವಿಧಾನದ ಪ್ರಕಾರ ಭಾರತೀಯ ನಾಗರಿಕರಿಗೆ ನೀಡಿದ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.